ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Assembly elections 2023: ಚುನಾವಣಾ ಸಮರಕ್ಕೆ ರಾಜಸ್ಥಾನ ಸಜ್ಜು

Published 24 ನವೆಂಬರ್ 2023, 14:23 IST
Last Updated 24 ನವೆಂಬರ್ 2023, 14:23 IST
ಅಕ್ಷರ ಗಾತ್ರ

ಜೈಪುರ: ರೋಚಕ ಸಮರಕ್ಕೆ ರಾಜಸ್ಥಾನ ಅಣಿಯಾಗಿದೆ. ಬಿಗಿ ಭದ್ರತೆಯ ನಡುವೆ 200 ವಿಧಾನ ಸಭಾ ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಲ್ಲಿ ನಾಳೆ (ನ.25) ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಪ್ರವೀಣ್ ಗುಪ್ತಾ ತಿಳಿಸಿದ್ದಾರೆ.

ಶ್ರೀಗಂಗಾನಗರದ ಕರಣಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಗುರ್ಮೀತ್ ಸಿಂಗ್ ಕೂನಾರ್ ನಿಧನದಿಂದಾಗಿ ಈ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.

ಮತದಾರರ ವಿವರ:
  • 1862– ಕಣದಲ್ಲಿರುವ ಅಭ್ಯರ್ಥಿಗಳು

  • 5,25,38,105–ಒಟ್ಟು ಮತದಾರರ ಸಂಖ್ಯೆ

  • 1,70,99,334 –18-30 ವರ್ಷದೊಳಗಿನ ಮತದಾರರು

  • 22,61,008 ಹೊಸದಾಗಿ ಮತ ಚಲಾಯಿಸುವವರು (18-19 ವಯೋಮಾನದವರು)

ಕಣದಲ್ಲಿರುವ ಪ್ರಮುಖ ಕಾಂಗ್ರೆಸ್‌ ನಾಯಕರು:
ಮುಖ್ಯಮಂತ್ರಿ ಅಶೋಕ್ ಗೆಹಲೋತ್‌, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್, ವಿಧಾನಸಭಾ ಸ್ಪೀಕರ್ ಸಿ.ಪಿ ಜೋಶಿ, ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್, ರಾಜೇಂದ್ರ ಯಾದವ್, ಮಹೇಂದ್ರಜೀತ್ ಸಿಂಗ್ ಮಾಳವಿಯಾ ಸೇರಿದಂತೆ ಹಲವಾರು ಸಚಿವರು ಕಾಂಗ್ರೆಸ್‌ನಿಂದ ಕಣದಲ್ಲಿದ್ದಾರೆ.
ಕಣದಲ್ಲಿರುವ ಪ್ರಮುಖ ಬಿಜೆಪಿ ನಾಯಕರು
ಬಿಜೆಪಿಯಿಂದ ಪ್ರತಿಪಕ್ಷದ ನಾಯಕ ರಾಜೇಂದ್ರ ರಾಥೋಡ್, ವಿರೋಧ ಪಕ್ಷದ ಉಪನಾಯಕ ಹಾಗೂ ಮಾಜಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ದಿಯಾ ಕುಮಾರಿ ಸೇರಿದಂತೆ ಇತತರು ಕಣದಲ್ಲಿದ್ದಾರೆ.

ಪಕ್ಷಾಂತರಗೊಂಡ ಕಾಂಗ್ರೆಸ್ ಶಾಸಕ ಗಿರಿರಾಜ್ ಸಿಂಗ್ ಮಾಲಿಂಗ, ಆರು ಲೋಕಸಭೆ ಮತ್ತು ಓರ್ವ ರಾಜ್ಯಸಭಾ ಸದಸ್ಯ ಸೇರಿದಂತೆ 59 ಶಾಸಕರಿಗೆ ಬಿಜೆಪಿ ಟಿಕೆಟ್ ನೀಡಿದ್ದರೆ, ಕಾಂಗ್ರೆಸ್ 7 ಸ್ವತಂತ್ರರರನ್ನು ಒಳಗೊಂಡಂತೆ 97 ಶಾಸಕರನ್ನು ಕಣಕ್ಕಿಳಿಸಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ಹೊರತುಪಡಿಸಿ, ಸಿಪಿಐ (ಎಂ), ಆರ್‌ಎಲ್‌ಪಿ, ಭಾರತ್ ಆದಿವಾಸಿ ಪಾರ್ಟಿ, ಭಾರತೀಯ ಟ್ರೈಬಲ್ ಪಾರ್ಟಿ, ಆಮ್ ಆದ್ಮಿ ಪಾರ್ಟಿ, ಎಐಎಂಐಎಂ ಸೇರಿದಂತೆ ಇತರ ಪಕ್ಷಗಳು ಸಹ ಚುನಾವಣೆಯಲ್ಲಿ ಸ್ಪರ್ಧಿಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT