ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜಸ್ಥಾನ | ಬಿಜೆಪಿ ಬಂಡಾಯ ನಾಯಕ ರಾಜಪಾಲ್‌ ಸಿಂಗ್‌ ಶೇಖಾವತ್‌ ನಾಮಪತ್ರ ವಾಪಾಸ್

Published : 9 ನವೆಂಬರ್ 2023, 9:51 IST
Last Updated : 9 ನವೆಂಬರ್ 2023, 9:51 IST
ಫಾಲೋ ಮಾಡಿ
Comments

ಜೈಪುರ: ರಾಜಸ್ಥಾನದ ಮಾಜಿ ಸಚಿವ ಹಾಗೂ ಬಿಜೆಪಿ ಬಂಡಾಯ ನಾಯಕ ರಾಜಪಾಲ್‌ ಸಿಂಗ್‌ ಶೇಖಾವತ್‌ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಝೋತ್ವಾರಾ ಕ್ಷೇತ್ರದಿಂದ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರವನ್ನು ಇಂದು (ಗುರುವಾರ) ಹಿಂಪಡೆದಿದ್ದಾರೆ.

‘ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವುದು ಅಗತ್ಯವಾಗಿದ್ದು, ಕಾಂಗ್ರೆಸ್‌ ಪಕ್ಷವನ್ನು ಸೋಲಿಸುವುದು ಮುಖ್ಯವಾಗಿದೆ. ಆದ್ದರಿಂದ ನಾನು ನಾಮಪತ್ರವನ್ನು ಹಿಂಪಡೆದಿದ್ದೇನೆ. ಅಮಿತ್‌ ಶಾ ಅವರೊಂದಿಗೆ ಮಾತನಾಡಿದ ಬಳಿಕ ಈ ನಿರ್ಧಾರ ಕೈಗೊಂಡಿದ್ದೇನೆ‘ ಎಂದು ಶೇಖಾವತ್‌ ಹೇಳಿದ್ದಾರೆ.

ಜೈಪುರ ಗ್ರಾಮಾಂತರ ಸಂಸದ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರನ್ನು ಝೋತ್ವಾರಾ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಿತ್ತು. ಇದು ಶೇಖಾವತ್ ಮತ್ತು ಅವರ ಬೆಂಬಲಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು.

ರಾಜಸ್ಥಾನದಲ್ಲಿ ಇದೇ 25ರಂದು ಚುನಾವಣೆ ನಡೆಯಲಿದೆ. ಇಂದು ನಾಮಪತ್ರ ವಾಪಾಸ್ ಪಡೆಯಲು ಕೊನೆ ದಿನವಾಗಿದೆ.

ಮಾಜಿ ಸಿಎಂ ವಸುಂಧರಾ ರಾಜೇ ಅವರ ಆಪ್ತರಾಗಿದ್ದ ಶೇಖಾವತ್‌, ರಾಜೇ ಸಂಪುಟದಲ್ಲಿ ನಗರಾಭಿವೃದ್ಧಿ ಮತ್ತು ವಸತಿ ಸಚಿವರಾಗಿ ಕಾರ್ಯನಿರ್ವಹಿಸಿದರು.

ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಅಭಿಷೇಕ್ ಚೌಧರಿ ಅವರನ್ನು ಝೋತ್ವಾರಾ ಕ್ಷೇತ್ರದಿಂದ ಕಾಂಗ್ರೆಸ್ ಕಣಕ್ಕಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT