ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Rajasthan Results 2023: ಸ್ಪಷ್ಟ ಬಹಮತದೊಂದಿಗೆ ಗೆದ್ದು ಬೀಗಿದ ಬಿಜೆಪಿ

Published 3 ಡಿಸೆಂಬರ್ 2023, 2:21 IST
Last Updated 3 ಡಿಸೆಂಬರ್ 2023, 2:21 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು. ಆಡಳಿತಾರೂಢ ಕಾಂಗ್ರೆಸ್‌ಗೆ ಬಲವಾದ ಪೆಟ್ಟು ಬಿದ್ದಿದ್ದು, ಅಧಿಕಾರ ಕಳೆದುಕೊಂಡಿದೆ. ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ.

ರಾಜಸ್ಥಾನದ ಮತದಾರರು ಪ್ರತಿ ಐದು ವರ್ಷಕ್ಕೊಮ್ಮೆ ಸರ್ಕಾರ ಬದಲಿಸುವ ಸಂಪ್ರದಾಯವನ್ನು ಕಳೆದ 25 ವರ್ಷಗಳಿಂದ ಅನುಸರಿಸಿಕೊಂಡು ಬಂದಿದ್ದಾರೆ. ಈ ‘ಸಂಪ್ರದಾಯ’ ಈ ಸಲವೂ ಮುಂದುರಿದಿದೆ. ಇದರಿಂದಾಗಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರಿಗೆ ಹಿನ್ನಡೆಯಾಗಿದೆ.

ರಾಜಸ್ಥಾನದಲ್ಲಿ ಬಿಜೆಪಿ 115 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇಲ್ಲಿ ಮ್ಯಾಜಿಕ್ ಸಂಖ್ಯೆ 100 ಆಗಿದೆ. ಕಾಂಗ್ರೆಸ್ 69 ಸ್ಥಾನಗಳಲ್ಲಿ ಜಯ ಸಾಧಿಸಿದೆ.

ರಾಜಸ್ಥಾನ

ಒಟ್ಟು ಕ್ಷೇತ್ರಗಳು: 199

ಬಹುಮಕ್ಕೆ ಅಗತ್ಯ ಸಂಖ್ಯೆ: 100

*ಅಭ್ಯರ್ಥಿ ನಿಧನರಾಗಿದ್ದ ಹಿನ್ನೆಲೆಯಲ್ಲಿ ಒಂದು ಕ್ಷೇತ್ರದ ಮತದಾನವನ್ನು ಮುಂದೂಡಲಾಗಿದೆ.

ರಾಜಸ್ಥಾನದ ಫಲಿತಾಂಶದ ಕಡೆಗೆ ಎಲ್ಲರ ದೃಷ್ಟಿ ನೆಟ್ಟಿತ್ತು. ರಾಜಸ್ಥಾನದಲ್ಲಿ ಬಿಜೆಪಿಯು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಸಮೀಕ್ಷೆಗಳು ‘ಭವಿಷ್ಯ’ ನುಡಿದಿವೆ. ಇದರಂತೆ ಮತಗಟ್ಟೆ ಸಮೀಕ್ಷೆಗಳು ನಿಜವೆನಿಸಿದೆ.

ರಾಜಸ್ಥಾನದಲ್ಲಿ ಮತಗಟ್ಟೆ ಸಮೀಕ್ಷೆ ಏನು ಹೇಳುತ್ತಿದೆ?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT