ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿ ಗುರ್‌ಮೀತ್‌ ಸಿಂಗ್‌ ಕೂನರ್‌ ನಿಧನ

Published 15 ನವೆಂಬರ್ 2023, 5:06 IST
Last Updated 15 ನವೆಂಬರ್ 2023, 5:06 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನದ ಕರಣ್‌ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗುರ್‌ಮೀತ್‌ ಸಿಂಗ್‌ ಕೂನರ್‌ ನಿಧನರಾಗಿದ್ದಾರೆ.

ಅವರಿಗೆ 75 ವರ್ಷ ವಯಸ್ಸಾಗಿತ್ತು. 

ಮೂತ್ರಪಿಂಡ ಸಮಸ್ಯೆ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಅವರು ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಗುರ್‌ಮೀತ್‌ ಸಿಂಗ್‌ ಮೃತಪಟ್ಟರು ಎಂದು ವೈದ್ಯರು ಹೇಳಿದ್ದಾರೆ.

ಗುರ್‌ಮೀತ್‌ ಸಿಂಗ್‌ ಕೂನರ್‌ ನಿಧನವನ್ನು ಕಾಂಗ್ರೆಸ್‌ ಪಕ್ಷದ ಮೂಲಗಳು ಖಚಿತಪಡಿಸಿದ್ದು ಯಾವುದೇ ಹೇಳಿಕೆ ನೀಡಿಲ್ಲ. 

200 ಕ್ಷೇತ್ರಗಳಿರುವ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25 ರಂದು ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT