ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಣಿ ಸೇನಾ ಮುಖ್ಯಸ್ಥನ ಗುಂಡಿಕ್ಕಿ ಹತ್ಯೆ: ಇಂದು ರಾಜಸ್ಥಾನ ಬಂದ್‌ಗೆ ಕರೆ

Published 6 ಡಿಸೆಂಬರ್ 2023, 2:56 IST
Last Updated 6 ಡಿಸೆಂಬರ್ 2023, 2:56 IST
ಅಕ್ಷರ ಗಾತ್ರ

ಜೈಪುರ: ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಘಟನೆ ಖಂಡಿಸಿ ಇಂದು (ಬುಧವಾರ) ರಾಜಸ್ಥಾನ ಬಂದ್‌ಗೆ ಕರೆ ನೀಡಲಾಗಿದೆ.

ಮಂಗಳವಾರ ಮಧ್ಯಾಹ್ನ ಶ್ಯಾಮ್ ನಗರ ಪ್ರದೇಶದಲ್ಲಿ ಸುಖದೇವ್ ಸಿಂಗ್ ಅವರನ್ನು ಹತ್ಯೆ ಮಾಡಲಾಗಿತ್ತು. ಪ್ರಾಥಮಿಕ ವರದಿಗಳ ಪ್ರಕಾರ, ಗೊಗಮೆಡಿ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಅವರ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ರಾಜಸ್ಥಾನ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಉಮೇಶ್ ಮಿಶ್ರಾ ‘ಪಿಟಿಐ’ಗೆ ತಿಳಿಸಿದ್ದಾರೆ.

‘ಗೊಗಮೆಡಿ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ' ಎಂದು ಜೈಪುರ ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್ ‘ಪಿಟಿಐ’ಗೆ ತಿಳಿಸಿದ್ದಾರೆ.

ರಾಜಕೀಯ ಕೆಸರೆರಚಾಟ

ರಾಜ್ಯದಲ್ಲಿ ಸರ್ಕಾರ ರಚಿಸಲು ಮುಂದಾಗಿರುವ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿರುವ ಕರ್ಣಿ ಸೇನಾ ಇಂದು (ಬುಧವಾರ) ರಾಜಸ್ಥಾನ ಬಂದ್‌ಗೆ ಕರೆ ನೀಡಿದೆ.

ಇತ್ತ ವಿಧಾನಸಭೆ ಚುನಾವಣಾ ಫಲಿತಾಂಶ ಹೊರಬಿದ್ದ ಎರಡೇ ದಿನದಲ್ಲಿ ಕರ್ಣಿ ಸೇನೆಯ ಮುಖ್ಯಸ್ಥನ ಹತ್ಯೆಯಾಗಿರುವುದು ಕಾಂಗ್ರೆಸ್‌ –ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಸುಖದೇವ್ ಸಿಂಗ್ ಗೊಗಮೆಡಿ ಮಾತನಾಡಿರುವ ವಿಡಿಯೊವನ್ನು ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ. ಕಾಂಗ್ರೆಸ್‌ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ತಮ್ಮ ಭದ್ರತೆಯನ್ನು ಕಡಿತಗೊಳಿಸಿದ್ದಾರೆ ಎಂದು ವಿಡಿಯೊದಲ್ಲಿ ಗೊಗಮೆಡಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT