ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ ರಾಜಕೀಯ: ಮುಖ್ಯಮಂತ್ರಿ ಗೆಹ್ಲೋಟ್ ನಿವಾಸದಲ್ಲಿ ಕ್ಯಾಬಿನೆಟ್ ಸಭೆ ಆರಂಭ

Last Updated 28 ಜುಲೈ 2020, 6:13 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರ ನಿವಾಸದಲ್ಲಿ ಮಂಗಳವಾರ ಬೆಳಗ್ಗೆ ಸಚಿವ ಸಂಪುಟ ಸಭೆ ಆರಂಭವಾಗಿದೆ.ರಾಜ್ಯದಲ್ಲಿ ಕಳೆದ ಕೆಲವು ವಾರಗಳಿಂದ ನಡೆಯುತ್ತಿರುವ ರಾಜಕೀಯಬಿಕ್ಕಟ್ಟಿನ ನಡುವೆ ಈ ಸಭೆ ನಡೆಯುತ್ತಿರುವುದು ಮಹತ್ವ ಪಡೆದುಕೊಂಡಿದೆ.

ಈ ಬಗ್ಗೆ ಸೋಮವಾರ ಮಾತನಾಡಿದ್ದರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಅವಿನಾಶ್ ಪಾಂಡೆ ಅವರು, ಕಾಂಗ್ರೆಸ್‌ ಸರ್ಕಾರವು ಬಹುಮತ ಹೊಂದಿದೆ. ಕೋವಿಡ್‌–19 ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ವಿಧಾನಸಭೆ ಅಧಿವೇಶನ ನಡೆಸಲು ಬಯಸುತ್ತದೆ ಎಂದಿದ್ದರು.

ಮುಖ್ಯಮಂತ್ರಿ ಗೆಹ್ಲೋಟ್‌ ಹಾಗೂ ಮಾಜಿ ಉಪಮುಖ್ಯಮಂತ್ರಿ ಸಚಿನ್‌ ಪೈಲಟ್‌ ಅವರ ನಡುವಿನ ಭಿನ್ನಾಭಿಪ್ರಾಯ ಬಹಿರಂಗವಾದ ಬಳಿಕ ರಾಜಸ್ಥಾನ ಕಾಂಗ್ರೆಸ್‌ ಸರ್ಕಾರ ಇಕ್ಕಟ್ಟಿನಲ್ಲಿ ಸಿಲುಕಿದೆ. ಪೈಲಟ್‌ ಅವರನ್ನು ಈಗಾಗಲೇ ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್‌ ಘಟಕದ ಮುಖ್ಯಸ್ಥ ಸ್ಥಾನದಿಂದ ತೆಗೆದುಹಾಕಲಾಗಿದೆ.

ಗೆಹ್ಲೋಟ್‌ ಸರ್ಕಾರವನ್ನು ಉರುಳಿಸಲು ಬಿಜೆಪಿ ಕುದುರೆ ವ್ಯಾಪಾರ ನಡೆಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ, ತನ್ನ ವಿರುದ್ಧದ ಆರೋಪಗಳನ್ನು ಬಿಜೆಪಿ ತಿರಸ್ಕರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT