ಜೈಪುರ: ಸಂಪುಟ ಪುನರ್ ರಚನೆಯು ರಾಜಸ್ಥಾನ ರಾಜ್ಯದಾದ್ಯಂತ ಸಕಾರಾತ್ಮಕ ಸಂದೇಶವನ್ನು ಸಾರಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹೇಳಿದ್ದಾರೆ.

ಪಕ್ಷದಲ್ಲಿ ವಿವಿಧ ಬಣಗಳಿವೆ ಎಂಬುದನ್ನು ಅವರು ಅಲ್ಲಗಳೆದಿದ್ದಾರೆ. ಉಪ ಮುಖ್ಯಮಂತ್ರಿಯಾಗಿದ್ದ ಅವರನ್ನು ಕಳೆದ ವರ್ಷ ಬಂಡಾಯ ಚಟುವಟಿಕೆಗಳ ಕಾರಣ ವಜಾ ಮಾಡಲಾಗಿತ್ತು.

ಸಂಪುಟದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಜನರ ಸಂಖ್ಯೆ ಹೆಚ್ಚಿಸಬೇಕೆಂಬ ತಮ್ಮ ಬೇಡಿಕೆಗೆ ಮನ್ನಣೆ ದೊರಕಿದೆ. ತಾವು ಎತ್ತಿದ್ದ ಇತರ ಕೆಲವು ಬೇಡಿಕೆಗಳೂ ಈಡೇರಿದ್ದು ತಮಗೆ ಸಂತಸವಾಗಿದೆ ಎಂದು ಹೇಳಿದ್ದಾರೆ.

‘ಸಂಪುಟದಲ್ಲಿ ಪರಿಶಿಷ್ಟ ಜಾತಿಯ ನಾಲ್ವರು ಸಚಿವರನ್ನು ಸೇರಿಸಲಾಗುತ್ತಿದೆ. ಅಲ್ಲದೆ ಬುಡಕಟ್ಟು ಜನಾಂಗ ಮತ್ತು ಮಹಿಳೆಯರ ಪ್ರಾತಿನಿಧ್ಯ ಕೂಡ ಹೆಚ್ಚಾಗಿದೆ. ಇದು ಅಗತ್ಯವಾಗಿತ್ತು’ ಎಂದು ಅವರು ವರದಿಗಾರರಿಗೆ ತಿಳಿಸಿದ್ದಾರೆ.ಪಕ್ಷದಲ್ಲಿ ಬಣಗಳು ಇಲ್ಲ. 2023ರ ವಿಧಾನಸಭಾ ಚುನಾವಣೆಯನ್ನು ಗೆಲ್ಲಲು ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಿದೆ ಎಂದಿದ್ದಾರೆ.

ಇವುಗಳನ್ನೂ ಓದಿ

ರಾಜಸ್ಥಾನ ಸಂಪುಟ ಪುನರ್‌ರಚನೆ: 12 ಮಂದಿ ಹೊಸಬರು, ಪೈಲಟ್ ಬಣದಿಂದ ಐವರಿಗೆ ಅವಕಾಶ

ರಾಜಸ್ಥಾನ ಸಂಪುಟ ಪುನರ್‌ರಚನೆ: ಇಂದು ಸಂಜೆ 4ಕ್ಕೆ 15 ಸಚಿವರ ಪ್ರಮಾಣ ವಚನ ಸ್ವೀಕಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.