ಜೈಪುರ(ರಾಜಸ್ಥಾನ): ಅವರು 'ಕಾಂಗ್ರೆಸ್ ಮುಕ್ತ ಭಾರತ್ ' ಎಂದು ಕಾಂಗ್ರೆಸ್ ಬಗ್ಗೆ ಮಾತನಾಡುತ್ತಿದ್ದರು ಆದರೆ, ಈಗ ಅವರು
ಕಾಂಗ್ರೆಸ್ ಕಂಡರೆ ಭಯಪಡುವಂತಾಗಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಪರೋಕ್ಷವಾಗಿ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.

ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗ ಅವರು ಕಾಂಗ್ರೆಸ್ ಬಗ್ಗೆ ಹೆದರುತ್ತಾರೆ, ರಾಜಸ್ಥಾನದಲ್ಲಿ ಸರ್ಕಾರ ಸ್ಥಿರವಾಗಿದೆ, ಅದು ತನ್ನ ಪೂರ್ಣ ಅವಧಿಯನ್ನು ಪೂರ್ಣಗೊಳಿಸುತ್ತದೆ. ಮುಂದಿನ ಚುನಾವಣೆಯಲ್ಲಿ ಗೆಲ್ಲಲು ನಾವು ಸಿದ್ಧತೆಯಲ್ಲಿ ತೊಡಗಿದ್ದೇವೆ ಎಂದು ಹೇಳಿದ್ದಾರೆ.

ಕೊರೊನಾ ನಿರ್ಮೂಲನೆ ಹೋರಾಟ ಮುಂದುವರಿದಿದೆ

ಸರ್ಕಾರ ಈಗ ಕೊರೊನಾ ಸೋಂಕಿನ ವಿರುದ್ಧ ಹೋರಾಟ ಮುಂದುವರಿಸಿದೆ. ಇದು ನಾವು ಮಾಡಲೇಬೇಕಾದ ಕೆಲಸ ಮಾಡುತ್ತಿದ್ದೇವೆ. ಆದರೆ, ಅವರು (ಬಿಜೆಪಿ) ಮಾತ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಇದು ವಾಜಪೇಯಿ ಕಾಲದಲ್ಲಿ ನಡೆಯುತ್ತಿರಲಿಲ್ಲ. ಆದರೆ, 2014ರಿಂದ ಈಚೆಗೆ ಈ ಬೆಳವಣಿಗೆ ಕಂಡುಬಂದಿದೆ. ಅದೂ ಧರ್ಮದ ಆಧಾರದಲ್ಲಿ ಸರ್ಕಾರ ಒಡೆಯುವುದು ಮುಖ್ಯ ಕೆಲಸವಾಗಿ ಬಿಟ್ಟಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.