ಜೈಪುರ: ಲಿವರ್ ಸೋಂಕಿನಿಂದ ಬಳಲುತ್ತಿದ್ದ ರಾಜಸ್ಥಾನದ ಕಾಂಗ್ರೆಸ್ ಶಾಸಕ ಗಜೇಂದ್ರ ಸಿಂಗ್ ಶಕ್ತಾವತ್ ಅವರು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು.

ಉದಯಪುರದ ವಲ್ಲಭನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಶಾಸಕರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿತ್ತು ಎಂದು ಕುಟುಂಬ ಮೂಲಗಳು ತಿಳಿಸಿವೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪಿಸಿಸಿ ಅಧ್ಯಕ್ಷ ಗೋವಿಂದ್ ಸಿಂಗ್ ದೊತಾಸ್ರಾ, ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಮತ್ತಿತರರು ಅಗಲಿದ ನಾಯಕನಿಗೆ ಸಂತಾಪ ಸೂಚಿಸಿದ್ದಾರೆ.

'ಕಾಂಗ್ರೆಸ್ ಶಾಸಕ ಗಜೇಂದ್ರ ಶಕ್ತಾವತ್ ಅವರ ಅಕಾಲಿಕ ನಿಧನಕ್ಕೆ ಸಂತಾಪಗಳು. ಅವರು ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ಆರೋಗ್ಯದ ಬಗ್ಗೆ ವಿಚಾರಿಸಲು ಶಾಸಕರ ಕುಟುಂಬ ಮತ್ತು ಡಾ.ಶಿವ ಸರೀನ್ ಅವರೊಂದಿಗೆ ಸಂಪರ್ಕದಲ್ಲಿದ್ದೆ' ಎಂದು ಮುಖ್ಯಮಂತ್ರಿ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

'ನನ್ನ ಸಹೋದ್ಯೋಗಿ ಮತ್ತು ಶಾಸಕ ಶ್ರೀ ಗಜೇಂದ್ರ ಸಿಂಗ್ ಶಕ್ತಾವತ್ ಜಿ ಅವರ ನಿಧನದ ಆಘಾತಕಾರಿ ಸುದ್ದಿಯಿಂದ ನಾನು ತುಂಬಾ ದುಃಖಿತನಾಗಿದ್ದೇನೆ. ವಿನಮ್ರ ಮತ್ತು ದಯೆಯುಳ್ಳ ಅವರು ಯಾವಾಗಲೂ ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಮುಡಿಪಾಗಿದ್ದರು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು' ಎಂದು ಸಚಿನ್ ಪೈಲಟ್ ಟ್ವೀಟ್ ಮಾಡಿದ್ದಾರೆ.

ಎರಡು ಬಾರಿ ಶಾಸಕರಾಗಿದ್ದ ಶಕ್ತಾವತ್ ಅವರು, ಕಳೆದ ವರ್ಷ ಜುಲೈನಲ್ಲಿ ಮುಖ್ಯಮಂತ್ರಿ ನಾಯಕತ್ವದ ವಿರುದ್ಧ ಬಂಡೆದ್ದಿದ್ದ ಪೈಲಟ್ ನೇತೃತ್ವದ ಕಾಂಗ್ರೆಸ್ ಶಾಸಕರ ತಂಡದಲ್ಲಿ ಇದ್ದರು. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರಿದ್ದಾರೆ.

ಇತ್ತೀಚೆಗೆ ನಿಧನರಾದ ರಾಜಸ್ಥಾನದ ಕಾಂಗ್ರೆಸ್‌ನ ಮೂರನೇ ಮತ್ತು ಹಾಲಿ ಶಾಸಕರಲ್ಲಿ ನಾಲ್ಕನೆಯವರಾಗಿದ್ದಾರೆ. ಕಾಂಗ್ರೆಸ್ ಶಾಸಕರಾದ ಮಾಸ್ಟರ್ ಭನ್ವಾರ್ ಲಾಲ್ ಮೇಘವಾಲ್, (ಚುರುವಿನ ಸುಜನ್‌ಗಡ), ಕೈಲಾಶ್ ತ್ರಿವೇದಿ (ಭಿಲ್ವಾರಾದ ಸಹಾರಾ) ಮತ್ತು ಬಿಜೆಪಿ ಶಾಸಕ ಕಿರಣ್ ಮಹೇಶ್ವರಿ (ರಾಜಸಮಂದ್) ಇತ್ತೀಚೆಗಷ್ಟೇ ನಿಧನರಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.