ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ: IT ನೋಟಿಸ್‌, ಬ್ಯಾಂಕ್‌ ಖಾತೆ ಸ್ಥಗಿತ ವಿರೋಧಿಸಿ ‘ಕೈ’ ಪ್ರತಿಭಟನೆ

Published 30 ಮಾರ್ಚ್ 2024, 3:31 IST
Last Updated 30 ಮಾರ್ಚ್ 2024, 3:31 IST
ಅಕ್ಷರ ಗಾತ್ರ

ಜೈಪುರ: ಆದಾಯ ತೆರಿಗೆ ಇಲಾಖೆಯಿಂದ ಹೊಸದಾಗಿ ₹1,823 ಕೋಟಿ ಮೊತ್ತದ ನೋಟಿಸ್‌ ಹಾಗೂ ಪಕ್ಷದ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿರುವುದನ್ನು ವಿರೋಧಿಸಿ ರಾಜಸ್ಥಾನ ಕಾಂಗ್ರೆಸ್‌ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಇಂದು (ಶನಿವಾರ) ಪ್ರತಿಭಟನೆ ನಡೆಸಲಿದೆ.

ವಿರೋಧ ಪಕ್ಷಗಳ ಮೇಲೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರವಾಗಿ ದಾಳಿ ನಡೆಸುತ್ತಿದೆ ಎಂದು ಪ್ರಧಾನ ಕಾರ್ಯದರ್ಶಿ ಮತ್ತು ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರ ಸ್ವರ್ಣಿಂ ಚತುರ್ವೇದಿ ಆರೋಪಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್‌ ಸಮಿತಿಯು ರಾಜಸ್ಥಾನದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಾರ್ವಜನಿಕ ಪ್ರದರ್ಶನಗಳನ್ನು ಏರ್ಪಡಿಸಲಿದೆ. ಪಕ್ಷದ ಎಲ್ಲಾ ಹಿರಿಯ ನಾಯಕರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಅದರಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿರುವುದು ಕೇಂದ್ರ ಸರ್ಕಾರದ ಯೋಜಿತ ಷಡ್ಯಂತ್ರವಾಗಿದೆ. ಇದೀಗ ₹1,823 ಕೋಟಿಯನ್ನು ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ಮೂಲಕ ನೋಟಿಸ್‌ ನೀಡುವ ಮೂಲಕ ಪ್ರಜಾಸತ್ತಾತ್ಮಕವಲ್ಲದ ಕ್ರಮವನ್ನು ಕೈಗೊಳ್ಳುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಲವನ್ನು ಕುಗ್ಗಿಸಲು ಈ ರೀತಿ ಮಾಡಲಾಗುತ್ತಿದೆ ಎಂದು ಚತುರ್ವೇದಿ ಆರೋಪಿಸಿದ್ದಾರೆ.

ಆದಾಯ ತೆರಿಗೆ (ಐ.ಟಿ) ಇಲಾಖೆಯು ಕಾಂಗ್ರೆಸ್‌ ಪಕ್ಷಕ್ಕೆ ₹1,823 ಕೋಟಿ ಮೊತ್ತದ ಡಿಮ್ಯಾಂಡ್‌ ನೋಟಿಸ್‌ ನೀಡಿದೆ. 2017-18 ರಿಂದ 2020-21 ವರ್ಷಗಳ ತೆರಿಗೆ ಬಾಕಿ, ಬಡ್ಡಿ ಹಾಗೂ ದಂಡಕ್ಕೆ ಸಂಬಂಧಿಸಿದಂತೆ ಹೊಸದಾಗಿ ಈ ನೋಟಿಸ್‌ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT