ಜೈಪುರ: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ₹63 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್, ಮದ್ಯ, ಚಿನ್ನ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ.
ಅಕ್ಟೋಬರ್ 9ರಿಂದ ನೀತಿ ಸಂಹಿತೆ ಜಾರಿಗೆ ಬಂದಿದೆ. ₹7.48 ಕೋಟಿ ನಗದು, ₹28.61 ಕೋಟಿ ಮೌಲ್ಯದ ಡ್ರಗ್ಸ್, ₹4.75 ಕೋಟಿ ಮೌಲ್ಯದ ಮದ್ಯ ಮತ್ತು ₹5.76 ಕೋಟಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಪ್ರವೀಣ್ ಗುಪ್ತಾ ಹೇಳಿದ್ದಾರೆ. ₹16.72 ಕೋಟಿ ಮೌಲ್ಯದ ಉಚಿತ ಕೊಡುಗೆಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.