ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Rajasthan Election Results: ರಾಜಸ್ಥಾನದಲ್ಲಿ 20 ಮಹಿಳಾ ಅಭ್ಯರ್ಥಿಗಳಿಗೆ ಜಯ

Published 4 ಡಿಸೆಂಬರ್ 2023, 5:17 IST
Last Updated 4 ಡಿಸೆಂಬರ್ 2023, 5:17 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಇದರಿಂದಾಗಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂಬ ಕಾಂಗ್ರೆಸ್ಸಿಗರ ಕನಸು ಈಡೇರಲಿಲ್ಲ.

ಈ ಬಾರಿ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ 20 ಮಹಿಳಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ತಲಾ ಒಂಬತ್ತು ಮತ್ತು ಇಬ್ಬರು ಪಕ್ಷೇತರ ಮಹಿಳಾ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.

ಈ ಬಾರಿ ಬಿಜೆಪಿಯ ದಿಯಾ ಕುಮಾರಿ ಅವರು ಕಾಂಗ್ರೆಸ್‌ನ ಸೀತಾರಾಮ್ ಅಗರ್ವಾಲ್ ವಿರುದ್ಧ 71,368 ಮತಗಳ ಅಂತರದಿಂದ ಗೆದ್ದಿರುವುದು ವಿಶೇಷ.

ಝಲರಾಪಾಟನ ಕ್ಷೇತ್ರದಲ್ಲಿ ಮಾಜಿ ಸಿಎಂ, ಬಿಜೆಪಿ ನಾಯಕಿ ವಸುಂಧರಾ ರಾಜೇ ಅವರು ತಮ್ಮ ಪ್ರತಿಸ್ಪರ್ಧಿ ರಾಮಲಾಲ್ ಚೌಹಾಣ್ ವಿರುದ್ಧ 51,193 ಮತಗಳಿಂದ ಗೆಲುವು ಸಾಧಿಸಿದ್ದಾರೆ.

ರಾಜಸ್ಥಾನದಲ್ಲಿ ವಿಧಾನಸಭೆಯ 200 ಸ್ಥಾನಗಳ ಪೈಕಿ 199 ಸ್ಥಾನಗಳಿಗೆ ನವೆಂಬರ್ 25ರಂದು ಚುನಾವಣೆ ನಡೆದಿತ್ತು. ಭಾನುವಾರ ನಡೆದ ಮತ ಎಣಿಕೆಯಲ್ಲಿ ಬಿಜೆಪಿ 115 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇತ್ತ 69 ಸ್ಥಾನಗಳಲ್ಲಿ ಕಾಂಗ್ರೆಸ್‌, 14 ಕ್ಷೇತ್ರಗಳಲ್ಲಿ ಇತರೆ ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ.

ಬಿಜೆಪಿ 20 ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು (ಒಟ್ಟು ಅಭ್ಯರ್ಥಿಗಳ ಶೇಕಡ 10ರಷ್ಟು). ಇತ್ತ ಕಾಂಗ್ರೆಸ್ 28 ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿತ್ತು (ಒಟ್ಟು ಅಭ್ಯರ್ಥಿಗಳ ಶೇಕಡ 14ರಷ್ಟು).

ಈ ಬಾರಿ ಚುನಾವಣೆಯಲ್ಲಿ ಶೇ.74.72ರಷ್ಟು ಮಹಿಳಾ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಇತ್ತ ಪುರುಷ ಮತದಾರರು ಶೇ.74.53ರಷ್ಟು ಮತದಾನ ಮಾಡಿದ್ದರು. 2018ರಲ್ಲಿ ಮಹಿಳಾ ಮತದಾರರು ಪ್ರಮಾಣ ಶೇ 74.66 ರಷ್ಟಿದ್ದು, ಶೇ 73.80ರಷ್ಟು ಪುರುಷ ಮತದಾರರಿದ್ದರು.

2018ರಲ್ಲಿ ಕಾಂಗ್ರೆಸ್ 23 ಮಹಿಳಾ ಅಭ್ಯರ್ಥಿಗಳಿಗೆ ಮತ್ತು ಬಿಜೆಪಿ 24 ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ 12, ಬಿಜೆಪಿಯಿಂದ 10 ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ವಿಧಾನಸಭೆ ಪ್ರವೇಶಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT