ಜೈಪುರ: ಕೋವಿಡ್ ಹರಡುವಿಕೆಯನ್ನು ಗಮನದಲ್ಲಿಟ್ಟುಕೊಂಡು ರಾಜಸ್ಥಾನದಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಹೈಯರ್ ಸೆಕೆಂಡರಿ(10, 12ನೇ ತರಗತಿ) ಪರೀಕ್ಷೆಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಕೇಂದ್ರ ಸರ್ಕಾರವು ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ರಾಜ್ಯಗಳು ಪರೀಕ್ಷೆಯ ಕುರಿತು ತೀರ್ಮಾನ ಸ್ಪಷ್ಟಪಡಿಸಿಕೊಂಡಿವೆ.

ಗುಜರಾತ್ ಮತ್ತು ಮಧ್ಯ ಪ್ರದೇಶದಲ್ಲಿ ಪರೀಕ್ಷೆಗಳನ್ನು ನಡೆಸದಿರಲು ಅಲ್ಲಿನ ರಾಜ್ಯ ಸರ್ಕಾರಗಳು ಬುಧವಾರ ನಿರ್ಧರಿಸಿವೆ.

‘ಕೋವಿಡ್–19 ಮೂರನೇ ಅಲೆಯಿಂದ ಮಕ್ಕಳು ಹೆಚ್ಚಾಗಿ ಸೋಂಕಿಗೆ ಒಳಗಾಗಬಹುದು ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಪರೀಕ್ಷೆಗಳನ್ನು ರದ್ದುಪಡಿಸುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ’ ಎಂದು ರಾಜಸ್ಥಾನ ಶಿಕ್ಷಣ ಸಚಿವ ಗೋವಿಂದ್ ಸಿಂಗ್ ದೊಸ್ತಾರ ತಿಳಿಸಿದ್ದಾರೆ.

ಈಗಾಗಲೇ ಹರಿಯಾಣ, ಉತ್ತರಾಖಂಡದಲ್ಲಿ ಬೋರ್ಡ್ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ.

ಇದನ್ನೂ ಓದಿ... ಸಿಬಿಎಸ್ಇಯ 12ನೇ ತರಗತಿ ಪರೀಕ್ಷೆ ಇಲ್ಲ: ಪ್ರಧಾನಿ ನೇತೃತ್ವದ ಸಭೆಯಲ್ಲಿ ನಿರ್ಧಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.