ಜೈಪುರ: ಮಹಿಳೆಗೆ ಮೋಟರ್‌ಸೈಕಲ್‌ನಿಂದ ಡಿಕ್ಕಿ ಹೊಡೆದಿದ್ದ ಪ್ರಕರಣದ ನಂತರ ಗುಂಪುದಾಳಿಗೆ ಒಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯು ಇಲ್ಲಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ರಾಜಸ್ತಾನದ ಅಳ್ವಾರ್ ಜಿಲ್ಲೆಯಲ್ಲಿ ಕೃತ್ಯ ನಡೆದಿದೆ. ಯೋಗೇಶ್ (19) ಮೃತ ವ್ಯಕ್ತಿ. ಗುಂಪುದಾಳಿ ನಡೆಸಿದ ವ್ಯಕ್ತಿಗಳನ್ನು ಬಂಧಿಸಬೇಕು ಎಂದು ಕುಟುಂಬ ಸದಸ್ಯರು ಒತ್ತಾಯಿಸಿದ್ದಾರೆ.

ಸೆಪ್ಟೆಂಬರ್ 15ರಂದು ಯೋಗೇಶ್ ಮೋಟರ್‌ಸೈಕಲ್‌ನಲ್ಲಿ ಬರುತ್ತಿದ್ದು, ಅಲ್ಲಿನ ಮೀನಾ ಕಾ ಬಾಸ್ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದಿದ್ದಾನೆ. ಆಕ್ರೋಶಗೊಂಡ ಸ್ಥಳೀಯರು ಗುಂಪುಗೂಡಿ ಯೋಗೇಶ್‌ಗೆ ತೀವ್ರವಾಗಿ ಥಳಿಸಿದ್ದಾರೆ. ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.