ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓದುತ್ತಿಲ್ಲವೆಂದು ಮಗಳನ್ನೇ ಕೊಂದ ತಂದೆ

Published 6 ಏಪ್ರಿಲ್ 2024, 15:49 IST
Last Updated 6 ಏಪ್ರಿಲ್ 2024, 15:49 IST
ಅಕ್ಷರ ಗಾತ್ರ

ಜೈಪುರ: ಶಾಲಾ ಪರೀಕ್ಷೆಗೆ ಸಿದ್ಧತೆ ನಡೆಸದ ಕಾರಣಕ್ಕೆ ರಾಜಸ್ಥಾನದ ಸಿರೋಹಿ ಜಿಲ್ಲೆಯ ವ್ಯಕ್ತಿಯೊಬ್ಬ ತನ್ನ 17 ವರ್ಷದ ಮಗಳನ್ನು ಥಳಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಪ್ರೇಮ್‌ ನಗರದ ಫತೇ ಮೊಹಮ್ಮದ್‌ನನ್ನು (42) ಬಂಧಿಸಲಾಗಿದೆ ಎಂದು ಉಪ ಪೊಲೀಸ್‌ ವರಿಷ್ಠಾಧಿಕಾರಿ ಪುಷ್ಪೇಂದ್ರ ವರ್ಮಾ ಮಾಹಿತಿ ನೀಡಿದ್ದಾರೆ.

‘11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮಗಳು ಶಾಲಾ ಪರೀಕ್ಷೆಗೆ ಸರಿಯಾಗಿ ಸಿದ್ಧತೆ ನಡೆಸುತ್ತಿರಲಿಲ್ಲ. ಇದರಿಂದ ಕೋಪಗೊಂಡ ಫತೇ, ಗುರುವಾರ ಕೋಲಿನಿಂದ ಹೊಡೆದಿದ್ದಾನೆ’ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದಿದ್ದಾರೆ.

‘ವಿದ್ಯಾರ್ಥಿನಿಯು ಆಂತರಿಕ ಗಾಯಗಳಿಂದಾಗಿ ಮೃತಪಟ್ಟಿರಬಹುದು. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಹುಡುಗಿಯ ಚಿಕ್ಕಪ್ಪ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ’ ಎಂದು ಡಿಎಸ್‌ಪಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT