ಕೋಟಾ: ರಾಜಸ್ಥಾನದ ಕೋಟಾದಲ್ಲಿ ನೀಟ್ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ ಒಡಿಶಾ ಮೂಲದ ವಿದ್ಯಾರ್ಥಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದರು.

ಇದರೊಂದಿಗೆ ಈ ವರ್ಷ ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡ ನೀಟ್ ಆಕಾಂಕ್ಷಿಗಳ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

2024ರಲ್ಲಿ 17 ಅಭ್ಯರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಯುವಕನನ್ನು ಅಭಿಜೀತ್ ಗಿರಿ ಎಂದು ಗುರುತಿಸಲಾಗಿದ್ದು, ಕಳೆದ ವರ್ಷ ಏಪ್ರಿಲ್ನಿಂದ ಈತ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ.

ಗುರುವಾರ ರಾತ್ರಿ ವಿಜ್ಞಾನ ನಗರ ಪ್ರದೇಶದ ಅಂಬೇಡ್ಕರ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಕೊಠಡಿಯಲ್ಲಿ ಯಾವುದೇ ಮರಣ ಪತ್ರ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಅಭಿಜಿತ್ ಗಿರಿ (18) ಆತ್ಮಹತ್ಯೆಗೆ ಶರಣಾದವರು. ಇವರು 2024ರ ಏಪ್ರಿಲ್ ನಿಂದ ಕೋಚಿಂಗ್ ಇನ್ಸ್ಟಿಟ್ಯೂಟ್ನಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ (ನೀಟ್) ತಯಾರಿ ನಡೆಸುತ್ತಿದ್ದರು.

ರಾತ್ರಿ 8 ಗಂಟೆ ಸುಮಾರಿಗೆ ಮೆಸ್ ಕೆಲಸಗಾರ ಅಭಿಜಿತ್ ಅವರ ಕೋಣೆಗೆ ಊಟ ನೀಡಲು ಹೋದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
.ಕೋಟಾ: ನೀಟ್ ಆಕಾಂಕ್ಷಿ ಆತ್ಮಹತ್ಯೆ.
ಎಷ್ಟು ಕೂಗಿದರೂ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ, ಮೆಸ್ ಕೆಲಸಗಾರ ಮತ್ತು ಹಾಸ್ಟೆಲ್ನಲ್ಲಿನ ಇತರರು ಬಾಗಿಲು ಒಡೆದು ನೋಡಿದಾಗ ಆತ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ ಎಂದು ಸಹಾಯಕ ಸಬ್-ಇನ್ಸ್ಪೆಕ್ಟರ್ (ಎಎಸ್ಐ) ಲಾಲ್ ಸಿಂಗ್ ತನ್ವಾರ್ ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಧಾವಿಸಿರುವ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಲ್ಲದೇ ಘಟನೆ ಸಂಬಂಧ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹಾಸ್ಟೆಲ್ಗಳಲ್ಲಿ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಸೀಲಿಂಗ್ ಫ್ಯಾನಿಗೆ ಆತ್ಮಹತ್ಯೆ ತಡೆಗಟ್ಟುವ ಸಾಧನವನ್ನು ಅಳವಡಿಸುವುದನ್ನು ಜಿಲ್ಲಾಡಳಿತ ಕಡ್ಡಾಯಗೊಳಿಸಿದೆ. ಆದರೆ, ಈ ಹಾಸ್ಟೆಲ್ ಕೊಠಡಿಯಲ್ಲಿ ಸಾಧನವನ್ನು ಅಳವಡಿಸಿರಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೊಠಡಿಯಿಂದ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ.
.ಒಡಿಶಾ: ‘ನೀಟ್’ ಆಕಾಂಕ್ಷಿ ಆತ್ಮಹತ್ಯೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.