ಜೈಪುರ: ರಾಜಸ್ಥಾನದ ಫಲೋಡಿ ಜಿಲ್ಲೆ ಮತೋಡಾ ಗ್ರಾಮದ ಬಳಿ ನಿಂತಿದ್ದ ಟ್ರಕ್ವೊಂದಕ್ಕೆ ಭಾನುವಾರ ಟೆಂಪೊ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 15 ಮಂದಿ ಮೃತಪಟ್ಟು, ಇತರ ಇಬ್ಬರು ಗಾಯಗೊಂಡಿದ್ದಾರೆ.

ಭಾರತ್ ಮಾಲಾ ಹೆದ್ದಾರಿಯ ಮಾತೋಡಾ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಟೆಂಪೊ ಟ್ರಾವೆಲರ್ನಲ್ಲಿ ಯಾತ್ರಾರ್ಥಿಗಳು ಸಂಚರಿಸುತ್ತಿದ್ದರು.

‘ಮೃತರು ಜೋಧಪುರ ನಿವಾಸಿಗಳಾಗಿದ್ದು, ಬಿಕಾನೇರ್ನಲ್ಲಿರುವ ಕೋಲಾಯತ್ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಜೋಧಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜೋಧಪುರ ಪೊಲೀಸ್ ಕಮಿಷನರ್ ಓಂ ಪ್ರಕಾಶ್ ತಿಳಿಸಿದ್ದಾರೆ.

ಘಟನೆಗೆ ರಾಜಸ್ಥಾನದ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ಸೂಚಿಸಿದ್ದಾರೆ.
.ಮೂರೂವರೆ ವರ್ಷಗಳಲ್ಲಿ 1,463 ರಸ್ತೆ ಅಪಘಾತ ಪ್ರಕರಣ ದಾಖಲು:ಸಾವಿನ ಮನೆಗೆ 587 ಮಂದಿ.ಮಹಾರಾಷ್ಟ್ರದಲ್ಲಿ ಅಪಘಾತ: ಬೀದರ್ ತಾಲ್ಲೂಕಿನ ನಾಲ್ವರು ಸಾವು, ಇಬ್ಬರಿಗೆ ಗಾಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.