ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯ ಅರೆಬೆತ್ತಲೆ ಮೆರವಣಿಗೆ: ಇಬ್ಬರ ಬಂಧನ

Published 14 ಏಪ್ರಿಲ್ 2024, 12:56 IST
Last Updated 14 ಏಪ್ರಿಲ್ 2024, 12:56 IST
ಅಕ್ಷರ ಗಾತ್ರ

ಜೈಪುರ: ವಿವಾಹಿತ ವ್ಯಕ್ತಿ ಜತೆ ಸಂಬಂಧ ಹೊಂದಿದ್ದಕ್ಕಾಗಿ ಮಹಿಳೆಯೊಬ್ಬರನ್ನು ಅರೆಬೆತ್ತಲೆಯಾಗಿ ಮೆರವಣಿಗೆ ನಡೆಸಿದ ಘಟನೆ ರಾಜಸ್ಥಾನದ ಬಾರ್ಮರ್‌ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಸರ್ವಾಡಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದ್ದು, ಅದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಅರೆಬೆತ್ತಲೆಯಾಗಿರುವ ಸಂತ್ರಸ್ತೆಯ ಕೂದಲಿಡಿದು ಮಹಿಳೆಯೊಬ್ಬರು ಎಳೆದುಕೊಂಡು ಹೋಗಿತ್ತಿರುವ ದೃಶ್ಯ ವಿಡಿಯೊದಲ್ಲಿದೆ.

ಈ ಕುರಿತು ಸಂದಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ದಾಖಲಾಗಿದ್ದು, ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ಸಂತ್ರಸ್ತೆಯನ್ನು ಸಮಾಲೋಚನೆಗೆ ಕಳುಹಿಸಲಾಗಿದೆ ಎಂದು ಬಾರ್ಮರ್‌ನ ಪೊಲೀಸ್‌ ವರಿಷ್ಠಾಧಿಕಾರಿ ಕುಂದನ್‌ ಕವಾರಿಯಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT