ತಿರುವನಂತಪುರ: ಕೇರಳ ಘಟಕದ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು ನೇಮಂ ಕ್ಷೇತ್ರದಿಂದ ಶನಿವಾರ ನಾಮಪತ್ರ ಸಲ್ಲಿಸಿದ್ದು, ಚರಾಸ್ತಿ ಮತ್ತು ಸ್ಥಿರಾಸ್ತಿ ಸೇರಿ ಒಟ್ಟು ₹93 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹೊಂದಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ರಾಜಸ್ಥಾನದ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಅವರು ರಾಜೀವ್ ಅವರ ಜೊತೆಗಿದ್ದರು.

ರಾಜೀವ್ ಅವರು ₹107 ಕೋಟಿಗೂ ಅಧಿಕ ಸಾಲ ಹೊಂದಿದ್ದು, ಇವರ ಪತ್ನಿ ಹೆಸರಿನಲ್ಲಿ ₹1.62 ಕೋಟಿ ಸಾಲ ಇದೆ. 2024–25ರ ಆದಾಯ ತೆರಿಗೆ ಪ್ರಕಾರ ರಾಜೀವ್ ಅವರ ಆದಾಯವು ₹92.91 ಕೋಟಿ ಇದ್ದು, ಪತ್ನಿಯ ಆದಾಯವು ₹60.50 ಕೋಟಿ ಇದೆ.

ಒಟ್ಟು ಚರಾಸ್ತಿಯ ಮೌಲ್ಯ ₹78.81 ಕೋಟಿ ಇದ್ದರೆ, ಚಿರಾಸ್ತಿಯ ಮೌಲ್ಯವು 15.07 ಕೋಟಿಗೂ ಅಧಿಕವಿದೆ. ರಾಜೀವ್ ಅವರು ಬೆಂಗಳೂರಿನಲ್ಲಿ ಆಸ್ತಿ ಹೊಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡ ವಿಚಾರಕ್ಕೆ ಸಂಬಂಧಿಸಿ ರಾಜೀವ್ ಅವರು ಎರಡು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.