ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

3ನೇ ಬಾರಿಗೆ ಅಧಿಕಾರ ವಹಿಸಿಕೊಳ್ಳುತ್ತಿರುವುದು ಮೋದಿಯವರ ದೊಡ್ಡ ಸಾಧನೆ: ರಜನಿಕಾಂತ್

Published 9 ಜೂನ್ 2024, 6:16 IST
Last Updated 9 ಜೂನ್ 2024, 6:16 IST
ಅಕ್ಷರ ಗಾತ್ರ

ಚೆನ್ನೈ: ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳುವುದು ದೊಡ್ಡ ಸಾಧನೆಯಾಗಿದೆ. ಇದು ಪ್ರಜಾಪ್ರಭುತ್ವದ ಆರೋಗ್ಯಕರ ಸಂಕೇತ ಎಂದು ತಮಿಳು ಸೂಪರ್‌ಸ್ಟಾರ್, ನಟ ರಜನಿಕಾಂತ್ ಭಾನುವಾರ ಹೇಳಿದ್ದಾರೆ.

ತಮ್ಮ ನಿವಾಸದಿಂದ ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಜವಾಹರಲಾಲ್ ನೆಹರು ನಂತರ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವುದು ನರೇಂದ್ರ ಮೋದಿ ಅವರ ದೊಡ್ಡ ಸಾಧನೆ. ಅವರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು' ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಮತ್ತು ಅವರ ನೂತನ ಸಚಿವ ಸಂಪುಟದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ರಜನಿಕಾಂತ್ ದೆಹಲಿಗೆ ತೆರಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT