ಲಖನೌ: ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು ನಗರದಲ್ಲಿ ಮಂಗಳವಾರ ಭರ್ಜರಿ ರೋಡ್ಶೋ ನಡೆಸಿ ಲೋಕಸಭಾ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಅಪಾರ ಬೆಂಬಲಿಗರ ಜೊತೆ ಮೆರವಣಿಗೆ ನಡೆಸಿದ ಅವರು ನಾಮಪತ್ರ ಸಲ್ಲಿಸಿದರು.

ಉತ್ತರ ಪ್ರದೇಶ ಬಿಜೆಪಿ ಘಟಕದ ಮುಖ್ಯಸ್ಥ ಮಹೇಂದ್ರನಾಥ ಪಾಂಡೆ, ಉಪಮುಖ್ಯಮಂತ್ರಿದಿನೇಶ್ ಶರ್ಮಾ ಮತ್ತು ಮಾಜಿ ಕೇಂದ್ರ ಸಚಿವ ಕಲ್ರಾಜ್ ಮಿಶ್ರಾ ಅವರು ರಾಜನಾಥ್ ಜೊತೆಗಿದ್ದರು.

ಲಖನೌ ನಗರಕೇಂದ್ರದ ಹಜರತ್ಗಂಜ್ ರಸ್ತೆಯಲ್ಲಿ ಸಾಗುತ್ತಿದ್ದ ಮೆರವಣಿಗೆ ಮೇಲೆ ಪುಷ್ಪವೃಷ್ಟಿ ಮಾಡಲಾಯಿತು. ಇಲ್ಲಿನ ದಕ್ಷಿಣಮುಖಿ ಹನುಮಾನ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು. ಆಠವಲೆ ಅವರ ರಿಪಬ್ಲಿಕನ್ ಪಾರ್ಟಿಯ ಕಾರ್ಯಕರ್ತರು ಬೆಂಬಲ ಸೂಚಿಸಿದರು. ರ್ಯಾಲಿಯಲ್ಲಿ ಭಾಗಿಯಾಗಿದ್ದ ಒಂಟೆಗಳ ಜೊತೆ ಕಾರ್ಯಕರ್ತರು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ದೃಶ್ಯ ಕಂಡುಬಂದಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.