ನವದೆಹಲಿ: ದೇಶವೊಂದರಿಂದ ಪ್ರಾಯೋಜಿತವಾದ ಗಡಿಯಾಚೆಗಿನ ಭಯೋತ್ಪಾದನೆಯನ್ನು ಶಾಂಘೈ ಸಹಕಾರ ಸಂಘಟನೆ(ಎಸ್ಸಿಒ) ಕಡೆಗಣಿಸಬಾರದು ಮತ್ತು ಈ ವಿಚಾರದಲ್ಲಿ ದ್ವಿಮುಖ ನೀತಿಗೆ ಅವಕಾಶ ನೀಡಬಾರದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ.

ವಿವಿಧ ಭಯೋತ್ಪಾದಕ ಸಂಘಟನೆಗಳಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿರುವುದನ್ನು ಉಲ್ಲೇಖಿಸಿ ಅವರು ಈ ಮಾತನ್ನು ಹೇಳಿದರು.

ಬಿಷ್ಕೆಕ್ನಲ್ಲಿ ನಡೆಯುತ್ತಿರುವ ಶಾಂಘೈ ಶೃಂಗಸಭೆಯಲ್ಲಿ ಮಾತನಾಡಿದ ಅವರು, ‘ಭಯೋತ್ಪಾದನಾ ಶಕ್ತಿಗಳನ್ನು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂಬ ದೃಢಸಂಕಲ್ಪವನ್ನು ಭಾರತವು ‘ಆಪರೇಷನ್ ಸಿಂಧೂರ’ದ ಮೂಲಕ ಪ್ರದರ್ಶಿಸಿದೆ’ ಎಂದು ಹೇಳಿದ್ದಾರೆ.

‘ದೇಶವೊಂದರ ಸಾರ್ವಭೌಮತೆಯ ಮೇಲೆ ದಾಳಿ ಮಾಡುವ ಭಯೋತ್ಪಾದಕರನ್ನು ನಾವು ಕಡೆಗಣಿಸಬಾರದು. ಭಯೋತ್ಪಾದಕರಿಗೆ ವಸತಿ ಮತ್ತು ಸುರಕ್ಷಿತ ತಾಣಗಳನ್ನು ಒದಗಿಸುವವವರ ವಿರುದ್ಧ ಕ್ರಮಕೈಗೊಳ್ಳಲು ಎಸ್ಸಿಒ ಹಿಂಜರಿಯಬಾರದು’ ಎಂದು ಆಗ್ರಹಿಸಿದರು.

ಚೀನಾ-ರಷ್ಯಾ ರಕ್ಷಣಾ ಸಚಿವರ ಜೊತೆ ಮಾತುಕತೆ

ರಾಜನಾಥ್ ಸಿಂಗ್ ಅವರು ಚೀನಾದ ರಕ್ಷಣಾ ಸಚಿವ ಅಡ್ಮಿರಲ್ ಡಾಂಗ್ ಜುನ್ ಮತ್ತು ರಷ್ಯಾದ ರಕ್ಷಣಾ ಸಚಿವ ಆ್ಯಂಡ್ರೈ ಬೆಲೌಸೊ ಅವರನ್ನು ಬಿಷ್ಕೆಕ್ನಲ್ಲಿ ಮಂಗಳವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಚೀನಾ ರಕ್ಷಣಾ ಸಚಿವರ ಜೊತೆಗಿನ ಮಾತುಕತೆಯಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿನ(ಎಲ್ಒಸಿ) ಪರಿಸ್ಥಿತಿ ಮತ್ತು ಗಡಿ ಭಾಗದಲ್ಲಿ ಶಾಂತಿ ಸ್ಥಾಪನೆಯ ಅಗತ್ಯತೆ ಬಗ್ಗೆ ಚರ್ಚೆ ನಡೆಯಿತು. ರಷ್ಯಾದಿಂದ ಭಾರತಕ್ಕೆ ಎಸ್–400 ಕ್ಷಿಪಣಿ ವ್ಯವಸ್ಥೆ ಪೂರೈಕೆ ಸೇರಿದಂತೆ ಹಲವು ರಕ್ಷಣಾ ಯೋಜನೆಗಳ ಕುರಿತು ರಾಜನಾಥ್ ಸಿಂಗ್ ಮತ್ತು ರಷ್ಯಾ ರಕ್ಷಣಾ ಸಚಿವರು ಮಾತುಕತೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.