ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಿಂದಾಗಿ 26 ಪ್ರವಾಸಿಗರು ಮೃತಪಟ್ಟ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಶ್ರೀನಗರ ಸೇನಾ ಕಚೇರಿಗೆ ಗುರುವಾರ ಭೇಟಿ ನೀಡಿದ್ದಾರೆ

ಭೇಟಿಯ ವೇಳೆ ಗಡಿ ನಿಯಂತ್ರಣಾ ರೇಖೆ ಸೇರಿದಂತೆ ಒಟ್ಟಾರೆ ಭದ್ರತಾ ಪರಿಸ್ಥಿತಿಯ ಬಗ್ಗೆ ಅವರು ಸೇನಾಧಿಕಾರಿಗಳಿಂದ ಮಾಹಿತಿ ಪಡೆದರು.

ಈ ವೇಳೆ ಮಾತನಾಡಿದ ಅವರು, ‘ಉಗ್ರರ ವಿರುದ್ಧದ ಹೋರಾಟದಲ್ಲಿ ಪ್ರಾಣತೆತ್ತ ವೀರ ಯೋಧರಿಗೆ ನನ್ನ ನಮನಗಳು. ಆಪರೇಷನ್ ಸಿಂಧೂರ ಬದ್ಧತೆಯಾಗಿದೆ, ಇದು ಉಗ್ರರ ವಿರುದ್ಧದ ಅತಿದೊಡ್ಡ ಕಾರ್ಯಾಚರಣೆಯಾಗಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲು ನಾವು ಯಾವುದೇ ಹಂತಕ್ಕೆ ಬೇಕಾದರೂ ಹೋಗುತ್ತೇವೆ ಎನ್ನುವುದನ್ನು ಸಾರಿದೆ. ನಮ್ಮ ಸೇನೆ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದೆ. ಪಾಕಿಸ್ತಾನದಲ್ಲಿ ಅಡಗಿರುವ ಭಯೋತ್ಪಾದಕರು ಮತ್ತು ಅವರ ಮಾಸ್ಟರ್ಮೈಂಡ್ಗಳು ಈಗ ಭಾರತೀಯ ಪಡೆಗಳ ಗುರಿಯಾಗಿದ್ದಾರೆ ಎಂದರು.

‘ಭಾರತ ಎಂದಿಗೂ ಯುದ್ಧವನ್ನು ಬೆಂಬಲಿಸಿಲ್ಲ ಆದರೆ ನಮ್ಮ ಸಾರ್ವಭೌಮತ್ವದ ಮೇಲೆ ದಾಳಿಯಾದಾಗ ನಾವು ಪ್ರತಿಕ್ರಿಯಿಸುತ್ತೇವೆ. ಕಳೆದ 35-40 ವರ್ಷಗಳಿಂದ ಭಾರತ ಗಡಿಯಾಚೆಗಿನ ಭಯೋತ್ಪಾದನೆಯನ್ನು ಎದುರಿಸಿದೆ. ಪಹಲ್ಗಾಮ್ ದಾಳಿಯ ಬಳಿಕ ಜಮ್ಮು ಮತ್ತು ಕಾಶ್ಮೀರದ ಜನ ಉಗ್ರರು ಮತ್ತು ಪಾಕಿಸ್ತಾನದ ಮೇಲೆ ತೋರಿಸಿರುವ ಸಿಟ್ಟಿನಿಂದಾಗಿಯೇ ಶತ್ರುಗಳನ್ನು ನಾಶ ಮಾಡಲು ಸಾಧ್ಯವಾಯಿತು ಎಂದುಕೊಳ್ಳುತ್ತೇನೆ. ಭಾರತದ ಈ ನಡೆಯನ್ನು ಶತ್ರುಗಳು ಎಂದಿಗೂ ಮರೆಯಲಾರರು’ ಎಂದರು.

‘ಬೇಜವಾಬ್ದಾರಿ ಮತ್ತು ರಾಕ್ಷಸ ಮನಸ್ಥಿತಿಯ ರಾಷ್ಟ್ರದ ಕೈಯಲ್ಲಿ ಪರಮಾಣು ಶಸ್ತ್ರಾಸ್ತ್ರಗಳು ಸುರಕ್ಷಿತವಾಗಿದೆಯೇ ಎಂದು ನಾನು ಇಡೀ ಜಗತ್ತನ್ನು ಕೇಳುತ್ತೇನೆ. ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳನ್ನು ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯ ಮೇಲ್ವಿಚಾರಣೆಗೆ ತೆಗೆದುಕೊಳ್ಳಬೇಕು ಎಂದು ಕೇಳುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.