ನವದೆಹಲಿ: ಕೋವಿಡ್–19 ಸಾಂಕ್ರಾಮಿಕದ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಸ್ಟ್ರೇಲಿಯಾ ರಕ್ಷಣಾ ಸಚಿವ ಪೀಟರ್ ಡಟನ್ ಜತೆ ಮಾತುಕತೆ ನಡೆಸಿದ್ದಾರೆ.

ಈ ಕುರಿತು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದು, ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾಂಧವ್ಯ, ಸಹಭಾಗಿತ್ವದ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಆಸ್ಟ್ರೇಲಿಯಾದೊಂದಿಗಿನ ವ್ಯೂಹಾತ್ಮಕ ಸಹಭಾಗಿತ್ವದ ಸಮಗ್ರ ಅನುಷ್ಠಾನಕ್ಕೆ ಭಾರತ ಬದ್ಧವಾಗಿದೆ ಎಂದೂ ಅವರು ಹೇಳಿದ್ದಾರೆ.

ಕೋವಿಡ್ ವಿರುದ್ಧದ ಹೋರಾಟದಲ್ಲಿ ಆಸ್ಟ್ರೇಲಿಯಾದ ಸಶಸ್ತ್ರ ಪಡೆಗಳು ಭಾರತವನ್ನು ಹೃತ್ಪೂರ್ವಕವಾಗಿ ಬೆಂಬಲಿಸಿವೆ ಎಂದೂ ಟ್ವೀಟ್‌ನಲ್ಲಿ ಸಚಿವರು ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.