ನವದೆಹಲಿ: ಈಶಾನ್ಯ ರಾಜ್ಯದ ನಗರವೊಂದರ ಹೆಸರು ಹೊಂದಿರುವ ಭಾರತದ ಮೊಟ್ಟಮೊದಲ ಸ್ವದೇಶಿ ನಿರ್ಮಿತ ‘ಐಎನ್ಎಸ್ ಇಂಫಾಲ್’ ಯುದ್ಧನೌಕೆಯನ್ನು ಮಂಗಳವಾರ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಲಾಗುತ್ತದೆ.

ಸಾಗರ ಸೀಮೆಯಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಸಿಕೊಳ್ಳುತ್ತಿರುವ ಚೀನಾಕ್ಕೆ ಪ್ರತಿರೋಧ ಒಡ್ಡುವ ಸಲುವಾಗಿ ರೂಪಿಸಿರುವ ಈ ಯುದ್ಧನೌಕೆಯನ್ನು ಮುಂಬೈನಲ್ಲಿರುವ ನೌಕಾಪಡೆಯ ಪಶ್ಚಿಮ ಕಮಾಂಡ್ಗೆ ಹಸ್ತಾಂತರಿಸಲಾಗುತ್ತದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

7400 ಟನ್ ತೂಕದ ಈ ನೌಕೆಯು 164 ಮೀ. ಉದ್ದವಿದ್ದು, ಶತ್ರು ರಾಷ್ಟ್ರದ ಕ್ಷಿಪಣಿಗಳನ್ನು ನಾಶ ಮಾಡಬಲ್ಲ ಕ್ಷಿಪಣಿ ಉಡ್ಡಯನ ಮಾಡುವ ಮತ್ತು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯವನ್ನು ಹೊಂದಿದೆ. ಮಜಗಾಂವ್ ಡಾಕ್ ಶಿಪ್ಬಿಲ್ಡರ್ಸ್ ಲಿಮಿಟೆಡ್ (ಎಮ್ಡಿಎಲ್) ಈ ನೌಕೆಯನ್ನು ನಿರ್ಮಿಸಿದೆ.

‘ಮಣಿಪುರ ಮತ್ತು ಅಲ್ಲಿನ ಇಂಫಾಲ್ ನಗರವು ದೇಶದ ರಕ್ಷಣೆ, ಸಾರ್ವಭೌಮತೆ ಮತ್ತು ಸುಸ್ಥಿರತೆಗೆ ಮಹತ್ವದ ಕೊಡುಗೆ ನೀಡಿರುವ ಹಿನ್ನೆಲೆಯಲ್ಲಿ ದೇಶದ ಯುದ್ಧನೌಕೆಯೊಂದಕ್ಕೆ ಅದರ ಹೆಸರು ಇಡಲಾಗಿದೆ’ ಎಂದು ಸೇನೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.