ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಯಾಚಿನ್‌ಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ ಸಿಂಗ್‌

Published 22 ಏಪ್ರಿಲ್ 2024, 11:33 IST
Last Updated 22 ಏಪ್ರಿಲ್ 2024, 11:33 IST
ಅಕ್ಷರ ಗಾತ್ರ

ನವದೆಹಲಿ: ಜಗತ್ತಿನ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್‌ಗೆ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ಸೋಮವಾರ ಭೇಟಿ ನೀಡಿ, ದೇಶದ ಸಮಗ್ರ ಸೇನಾ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು. ಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಪಾಂಡೆ ಅವರೂ ಈ ವೇಳೆ ರಾಜನಾಥ್‌ ಜೊತೆಗೂಡಿದ್ದರು.

ಸಿಯಾಚಿನ್‌ನಲ್ಲಿ ಭಾರತೀಯ ಸೇನೆ ನಿಯೋಜಿಸಿ 40 ವರ್ಷಗಳು ತುಂಬಿ ಕೆಲವೇ ದಿನಗಳು ಕಳೆದಿದ್ದು, ಈ ಸಂದರ್ಭದಲ್ಲಿ ರಾಜನಾಥ ಸಿಂಗ್‌ ಅಲ್ಲಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಅಲ್ಲಿ ನಿಯೋಜನೆಗೊಂಡ ಸೈನಿಕರ ಜೊತೆ ಮಾತುಕತೆ ನಡೆಸಿದ್ದಾರೆ.

ಕಾರಾಕೋರಂ ಪರ್ವತ ಶ್ರೇಣಿಯಲ್ಲಿ ಸುಮಾರು 20,000 ಅಡಿ ಎತ್ತರದಲ್ಲಿರುವ ಸಿಯಾಚಿನ್‌ ನೀರ್ಗಲ್ಲಿನಲ್ಲಿ 1984ರ ಏಪ್ರಿಲ್‌ನಲ್ಲಿ ‘ಆಪರೇಷನ್‌ ಮೇಘದೂತ್‌’ ಸೇನಾ ಕಾರ್ಯಾಚರಣೆಯ ಭಾಗವಾಗಿ ಸೇನೆಯನ್ನು ನಿಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT