ನವದೆಹಲಿ: ಗುಜರಾತ್ನ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಲುವಾಗಿ, ಗುಜರಾತ್ನಲ್ಲಿ ನಡೆಯಲಿರುವ ಪಕ್ಷದ ನೂತನ ಶಾಸಕರ ಸಭೆಗೆ ಬಿಜೆಪಿಯ ಹಿರಿಯ ನಾಯಕರಾದ ರಾಜನಾಥ್ ಸಿಂಗ್, ಬಿ ಎಸ್ ಯಡಿಯೂರಪ್ಪ ಮತ್ತು ಅರ್ಜುನ್ ಮುಂಡಾ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ಶುಕ್ರವಾರ ನೇಮಿಸಲಾಗಿದೆ.

ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, 182 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 156 ಸ್ಥಾನಗಳನ್ನು ಪಡೆಯುವ ಮೂಲಕ ಐತಿಹಾಸಿಕ ಗೆಲುವು ದಾಖಲಿಸಿದೆ.

ನೂತನವಾಗಿ ಆಯ್ಕೆಯಾಗಿರುವ ಶಾಸಕರ ಸಭೆಯನ್ನು ಬಿಜೆಪಿ ಶನಿವಾರ ಬೆಳಗ್ಗೆ ಕರೆದಿದೆ. ಶಾಸಕಾಂಗ ಪಕ್ಷದ ನಾಯಕನನ್ನು ಈ ಸಭೆಯಲ್ಲಿ ಆಯ್ಕೆ ಮಾಡಲಾಗುತ್ತದೆ. ಅವರೇ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಅದರೆ, ಭೂಪೇಂದ್ರ ಪಟೇಲ್ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ಈ ಹಿಂದೆ ಘೋಷಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.