ನವದೆಹಲಿ: ಸಂಸತ್ತಿನ ಉಭಯ ಸದನಗಳಲ್ಲಿ ವಿರೋಧ ಪಕ್ಷಗಳ ಸದಸ್ಯರು ಪೆಗಾಸಸ್, ನೂತನ ಕೃಷಿ ಕಾಯ್ದೆಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದ ಗದ್ದಲ ಉಂಟಾದ ಪರಿಣಾಮ ಕಲಾಪವನ್ನು ಮಧ್ಯಾಹ್ನ 2 ಗಂಟೆವರೆಗೆ ಮಂದೂಡಲಾಗಿದೆ.

ರಾಜ್ಯಸಭೆಯಲ್ಲಿ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಇತರ ಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಪ್ರತಿಭಟಿಸಿದರೆ, ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಸದಸ್ಯರು ಸ್ಪೀಕರ್ ಪೀಠದ ಮುಂಭಾಗಕ್ಕೆ ತೆರಳಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಗೌರವ ನಮನ ಸಲ್ಲಿಸಲಾಯಿತು. ಟೋಕಿಯೊ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು ಅವರನ್ನು ಅಭಿನಂದಿಸಲಾಯಿತು.

ರಾಜ್ಯಸಭಾ ಕಲಾಪವನ್ನು ಮಧ್ಯಾಹ್ನ 2ಕ್ಕೆ ಮುಂದೂಡಿದ ಸಭಾಧ್ಯಕ್ಷ ಎಂ.ವೆಂಕಯ್ಯನಾಯ್ಡು, ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳ ಬಗ್ಗೆ ಚರ್ಚಿಸದಂತೆಸದಸ್ಯರನ್ನು ತಡೆಯಲಾಗಿದೆ. ದಿನದಿಂದ ದಿನಕ್ಕೆ ನಾವು ಅಸಹಾಯಕರಾಗುತ್ತಿದ್ದೇವೆ’ ಎಂದರು.

ಲೋಕಸಭೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಕಲಾಪ ನಡೆದಿದ್ದು, ಪ್ರಶ್ನೋತ್ತರ ಅವಧಿಯಲ್ಲಿ ಕೆಲವೊಂದು ಪ್ರಶ್ನೆಗಳಿಗೆ ಉತ್ತರಿಸಲಾಯಿತು. ಬಳಿಕ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನ 2ಕ್ಕೆ ಮುಂದೂಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.