ಹೈದರಾಬಾದ್: ತೆಲಂಗಾಣ ವಿಧಾನಸಭೆಯಿಂದ ರಾಜ್ಯಸಭೆಯಲ್ಲಿ ಖಾಲಿ ಇರುವ ಒಂದು ಸ್ಥಾನಕ್ಕೆ ನಡೆಯುತ್ತಿರುವ ಉಪಚುನಾವಣೆಗೆ ಖ್ಯಾತ ವಕೀಲ, ಕಾಂಗ್ರೆಸ್ ನಾಯಕ ಅಭಿಷೇಕ್‌ಮನು ಸಿಂಘ್ವಿ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.
ಉಪಚುನಾವಣೆಯು ಸೆಪ್ಟೆಂಬರ್ 3ರಂದು ನಡೆಯಲಿದೆ. ಬಿಆರ್‌ಎಸ್ ಹಾಗೂ ಬಿಜೆಪಿ ಪಕ್ಷವು ಯಾವುದೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೆ ಇರುವುದರಿಂದ ಸಿಂಘ್ವಿ ಅವರು ಅವಿರೋಧವಾಗಿ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ತೊರೆದು ಬಿಆರ್‌ಎಸ್ ಸೇರಿಕೊಂಡ ಕೆ.ಕೇಶವ್ ರಾವ್ ಅವರ ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು.
ನಾಮಪತ್ರ ಸಲ್ಲಿಕೆ ವೇಳೆ ಸಿಂಘ್ವಿ ಅವರೊಂದಿಗೆ ಮುಖ್ಯಮಂತ್ರಿ ರೇವಂತ ರೆಡ್ಡಿ, ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ದೀಪಾ ದಾಸ್ ಮುನ್ಶಿ ಹಾಗೂ ಪಕ್ಷದ ಹಿರಿಯ ನಾಯಕರು ಇದ್ದರು.