ನವದೆಹಲಿ: ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ನಿರ್ಣಯವನ್ನು ರಾಜ್ಯಸಭೆ ಶುಕ್ರವಾರ ಅಂಗೀಕರಿಸಿದೆ.

ಪಕ್ಷಾತೀತ ಸದಸ್ಯರು ಈ ನಿರ್ಧಾರವನ್ನು ಬೆಂಬಲಿಸಿದರೆ, ರಾಜ್ಯದಲ್ಲಿ (ಮಣಿಪುರ) ಕಾನೂನು ಸುವ್ಯವಸ್ಥೆ ಮರುಸ್ಥಾಪಿಸಲು ಮತ್ತು ಹಿಂಸಾಚಾರವನ್ನು ತಡೆಯಲು ಕೇಂದ್ರ ವಿಫಲವಾಗಿದೆ ಎಂದು ವಿರೋಧ ಪಕ್ಷದ ಸದಸ್ಯರು ಟೀಕಿಸಿದರು.

ನಿರ್ಣಯದ ಮೇಲಿನ ಚರ್ಚೆಯ ಕೊನೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಣಿಪುರದಲ್ಲಿ ಕಾದಾಡುತ್ತಿರುವ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಸಂಘರ್ಷಕ್ಕೆ ಶೀಘ್ರ ಪರಿಹಾರ ದೊರೆಯುವ ಭರವಸೆ ವ್ಯಕ್ತಪಡಿಸಿದರು.

ಶಾಂತಿಯುತ ಪರಿಹಾರಕ್ಕಾಗಿ ಎರಡೂ ಸಮುದಾಯಗಳೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಈಗಾಗಲೇ ಎರಡು ಸಭೆಗಳು ನಡೆದಿವೆ. ಮೂರನೇ ಸಭೆ ಶೀಘ್ರದಲ್ಲೇ ನವದೆಹಲಿಯಲ್ಲಿ ನಡೆಯಲಿದೆ. ರಾಜ್ಯದಲ್ಲಿ ಸಹಜ ಸ್ಥಿತಿ ಮರಳಿ ತರಲು ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದೂ ಅವರು ಸದನಕ್ಕೆ ಮಾಹಿತಿ ನೀಡಿದರು.
.ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ: ಲೋಕಸಭೆ ಒಪ್ಪಿಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.