ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ ಉಪ ಸಭಾಪತಿ ಆಯ್ಕೆ ಪ್ರಕ್ರಿಯೆ ಆರಂಭ

Last Updated 9 ಆಗಸ್ಟ್ 2018, 5:59 IST
ಅಕ್ಷರ ಗಾತ್ರ

ನವದೆಹಲಿ:ರಾಜ್ಯಸಭೆ ಉಪ ಸಭಾಪತಿ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆಗೆ ಗುರುವಾರ ಬೆಳಿಗ್ಗೆ ಚಾಲನೆ ದೊರೆಯಿತು.

ರಾಜ್ಯಸಭೆಯ ಸಭಾಪತಿಯೂ ಆಗಿರುವ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಸದನದಲ್ಲಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದರು.

ಉಪ ಸಭಾಪತಿ ಸ್ಥಾನಕ್ಕೆ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ನಡುವಿನ ತೀವ್ರ ಹಣಾಹಣಿಗೆ ವೇದಿಕೆ ಸಿದ್ಧವಾಗಿದೆ.

ಕುರಿಯನ್ ಅವರ ನಿವೃತ್ತಿಯಿಂದ ತೆರವಾಗಿರುವ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಯು ಸಂಸದ ಹರಿವಂಶ ನಾರಾಯಣ ಸಿಂಗ್‌ ನಾಮಪತ್ರ ಸಲ್ಲಿಸಿದ್ದರೆ, ಕಾಂಗ್ರೆಸ್‌ನಿಂದ ಕನ್ನಡಿಗ ಬಿ.ಕೆ. ಹರಿಪ್ರಸಾದ್‌ ಕಣಕ್ಕಿಳಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT