ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯಸಭೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವಿರೋಧ ಆಯ್ಕೆ

Published 20 ಫೆಬ್ರುವರಿ 2024, 11:12 IST
Last Updated 20 ಫೆಬ್ರುವರಿ 2024, 11:12 IST
ಅಕ್ಷರ ಗಾತ್ರ

ಜೈಪುರ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರಾಗಿ ಇಂದು (ಮಂಗಳವಾರ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋನಿಯಾ ಗಾಂಧಿ ಹಾಗೂ ಭಾರತೀಯ ಜನತಾ ಪಕ್ಷದ ಚುನ್ನಿಲಾಲ್ ಗರಸಿಯಾ ಮತ್ತು ಮದನ್ ರಾಥೋಡ್ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಾಜ್ಯ ವಿಧಾನಸಭೆ ಕಾರ್ಯದರ್ಶಿ ಮಹಾವೀರ್ ಪ್ರಸಾದ್ ಶರ್ಮಾ ಪ್ರಕಟಿಸಿದ್ದಾರೆ.

ಮಂಗಳವಾರ ನಾಮಪತ್ರ ಹಿಂತೆಗೆಯುವ ಕೊನೆಯ ದಿನಾಂಕವಾಗಿತ್ತು. ಬೇರೆ ಯಾವುದೇ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿಲ್ಲದ ಕಾರಣ ಈ ಮೂವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮಹಾವೀರ್ ಪ್ರಸಾದ್ ಶರ್ಮಾ ಘೋಷಿಸಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಬಿಜೆಪಿಯ ಭೂಪೇಂದ್ರ ಯಾದವ್ ಅವರ ರಾಜ್ಯಸಭೆ ಸದಸ್ಯತ್ವದ ಅವಧಿ ಏಪ್ರಿಲ್ 3ರಂದು ಕೊನೆಗೊಳ್ಳಲಿದೆ. ಬಿಜೆಪಿಯ ಕಿರೋಡಿ ಲಾಲ್ ಮೀಣಾ ಕಳೆದ ಡಿಸೆಂಬರ್‌ನಲ್ಲಿ ಶಾಸಕರಾಗಿ ಆಯ್ಕೆಯಾದ ಬಳಿಕ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಇದರೊಂದಿಗೆ ರಾಜಸ್ಥಾನಕ್ಕಿದ್ದ 10 ರಾಜ್ಯಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 6 ಮತ್ತು ಬಿಜೆಪಿ 4 ಸದಸ್ಯರನ್ನು ಹೊಂದಿದಂತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT