ನವದೆಹಲಿ: ರಾಜ್ಯಸಭಾ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

ಕರ್ನಾಟಕದಿಂದ ರಾಜ್ಯಸಭೆಗೆ ಅಜಯ್ ಮಾಕೇನ್, ಡಾ. ಸೈಯದ್ ನಾಸೀರ್ ಹುಸೇನ್, ಜಿ.ಸಿ. ಚಂದ್ರಶೇಖರ್ ಅವರಿಗೆ ಟಿಕೆಟ್ ನೀಡಲಾಗಿದೆ.

ಮಧ್ಯಪ್ರದೇಶದಿಂದ ಅಶೋಕ್ ಸಿಂಗ್ ಸ್ಪರ್ಧಿಸಿದರೆ, ತೆಲಂಗಾಣದಿಂದ ರೇಣುಕಾ ಚೌಧರಿ, ಎಂ.ಅನಿಲ್ ಕುಮಾರ್ ಯಾದವ್ ಕಣಕ್ಕಿಳಿಯಲಿದ್ದಾರೆ.

ಒಟ್ಟು 15 ರಾಜ್ಯಗಳ 56 ಸ್ಥಾನಗಳಿಗೆ ಫೆ.27ರಂದು ದ್ವೈವಾರ್ಷಿಕ ಚುನಾವಣೆ ನಡೆಯಲಿದೆ.

ರಾಜಸ್ಥಾನದಿಂದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಬಿಹಾರದಿಂದ ಡಾ. ಅಖಿಲೇಶ್ ಪ್ರಸಾದ್ ಸಿಂಗ್, ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನು ಸಿಂಘ್ವಿ, ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೋರೆ ಅವರಿಗೆ ಈಗಾಗಲೇ ಟಿಕೆಟ್ ಘೋಷಿಸಿದೆ.

ಬುಧವಾರ ಜೈಪುರಕ್ಕೆ ಬಂದಿಳಿದ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.