ನವದೆಹಲಿ: ಬರೋಬ್ಬರಿ 17 ಗಂಟೆಗಳ ಕಲಾಪ ನಡೆದು ಶುಕ್ರವಾರ ಮುಂಜಾನೆ 4 ಗಂಟೆಗೆ ರಾಜ್ಯಸಭೆ ಕಲಾಪವನ್ನು ಮುಂದೂಡಲಾಯಿತು. ಬೆಳಿಗ್ಗೆ 11 ಗಂಟೆಗೆ ಮತ್ತೆ ಕಲಾಪ ಆರಂಭವಾಗಲಿದೆ.
.Waqf Amendment Bill | ವಕ್ಫ್ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ .
‘ಇದೊಂದು ಅಪರೂಪದ ಸನ್ನಿವೇಶವಾಗಿದೆ. ಮುಂಜಾನೆ 4.02ರವರೆಗೆ ಕಲಾಪ ನಡೆದು ಅದೇ ದಿನ 11 ಗಂಟೆಗೆ ಮತ್ತೆ ಕಲಾಪ ಆರಂಭವಾಗಲಿದೆ’ ಎಂದು ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಹೇಳಿದರು.

ಗುರುವಾರ ಬೆಳಿಗ್ಗೆ 11 ಗಂಟೆಗೆ ಕಲಾಪ ಆರಂಭವಾಯಿತು. ನಿಗದಿಯಂತೆ ಮೊದಲು ಶೂನ್ಯ ವೇಳೆ ಹಾಗೂ ಪ್ರಶ್ನೋತ್ತರ ಅವಧಿ ನಡೆಯಿತು.
.‘ಎಪಿಕ್’ ಚರ್ಚೆಗೆ ಬಿಗಿಪಟ್ಟು: ರಾಜ್ಯಸಭೆ ಕಲಾಪದಿಂದ ಹೊರನಡೆದ ವಿಪಕ್ಷ ಸದಸ್ಯರು.
ಮಧ್ಯಾಹ್ನ 1 ಗಂಟೆಗೆ ವಕ್ಫ್ ತಿದ್ದುಪಡಿ ಕಾಯ್ದೆ–2025 ಅನ್ನು ಚರ್ಚೆಗೆ ತೆಗೆದುಕೊಳ್ಳಲಾಯಿತು. ಶುಕ್ರವಾರ ನಸುಕಿನ 2.30ಕ್ಕೆ ಅಂಗೀಕಾರ ನೀಡಿತು. ಮಸೂದೆಯ ಪರವಾಗಿ 128 ಮಂದಿ, ವಿರುದ್ಧವಾಗಿ 95 ಮಂದಿ ಮತ ಚಲಾಯಿಸಿದರು.

ಇದಾದ ಬಳಿಕ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ನಿರ್ಣಯವನ್ನು ಗೃಹ ಸಚಿವ ಅಮಿತ್ ಶಾ ಮಂಡಿಸಿದರು. ಇದಕ್ಕೆ ರಾಜ್ಯಸಭೆ ಒಪ್ಪಿಗೆ ನೀಡಿತು.
.ರಾಜ್ಯಸಭೆ: ಪಶ್ಚಿಮ ಬಂಗಾಳಕ್ಕೆ ಬಾಂಗ್ಲಾ ಎಂದು ಮರುನಾಮಕರಣ ಮಾಡಲು ಟಿಎಂಸಿ ಒತ್ತಾಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.