ವಿಪಕ್ಷ ನಾಯಕರ ಐಫೋನ್ ಹ್ಯಾಕ್ ಯತ್ನ: ತನಿಖೆಗೆ ಕೇಂದ್ರ ಸರ್ಕಾರ ಆದೇಶ, 68 ಸಾಧಕರು, 10 ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸಲು ವೈಷ್ಣವ್‌ಗೆ ಸಿದ್ದರಾಮಯ್ಯ ಪತ್ರ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ
ಸರ್ಕಾರಿ ಪ್ರಾಯೋಜಿತ ಹ್ಯಾಕರ್‌ಗಳಿಂದ ಐಫೋನ್ ಅನ್ನು ಹ್ಯಾಕ್ ಮಾಡಿ, ಮಾಹಿತಿ ಕದಿಯುವ ಪ್ರಯತ್ನಗಳಾಗುತ್ತಿವೆ ಎಂದು ಆ್ಯಪಲ್ ಕಂಪನಿ ವಿರೋಧ ಪಕ್ಷಗಳ ನಾಯಕರಿಗೆ ಕಳುಹಿಸಿರುವ ಸಂದೇಶದ ಬಗ್ಗೆ ತನಿಖೆಗೆ ಕೇಂದ್ರ ಸರ್ಕಾರ ಆದೇಶಿಸಿದೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 68 ಸಾಧಕರು ಹಾಗೂ 10 ಸಂಸ್ಥೆಗಳಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ.
ಪ್ರತಿದಿನ ಬೆಂಗಳೂರು–ಧಾರವಾಡ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಕೇಳಿಕೊಂಡಿದ್ದಾರೆ. ಈ ಕುರಿತು ಮಂಗಳವಾರ ಅವರು ಪತ್ರ ಬರೆದಿದ್ದಾರೆ.
ಆಂಧ್ರಪ್ರದೇಶದ ಕೌಶಲ ಅಭಿವೃದ್ಧಿ ನಿಗಮದ ಅವ್ಯವಹಾರದಲ್ಲಿ ಆಂಧ್ರಪ್ರದೇಶ ಹೈಕೋರ್ಟ್‌ನಿಂದ ತಾತ್ಕಾಲಿಕ ಜಾಮೀನು ಪಡೆದಿರುವ ಟಿಡಿಪಿ ಪಕ್ಷದ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಇಲ್ಲಿನ ಕೇಂದ್ರ ಕಾರಾಗೃಹದಿಂದ ಇಂದು (ಮಂಗಳವಾರ) ಬಿಡುಗಡೆಗೊಂಡರು.
ಹುಲಿ ಉಗುರಿನ ಪದಕವನ್ನು ಧರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ್ ವಿರುದ್ಧ ಅರಣ್ಯ ಇಲಾಖೆಯ ಮುಂದಿನ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ವಿಧಿಸಿದೆ.
ಗುಜರಾತ್‌ನ ಮೊದಲ ಪಾರಂಪರಿಕ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಂಗಳವಾರ) ಚಾಲನೆ ನೀಡಿದ್ದಾರೆ. ಮೂರು ಬೋಗಿಗಳನ್ನು ಹೊಂದಿರುವ ಈ ರೈಲು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಏಕತೆಯ ಪ್ರತಿಮೆ ಇರುವ ಏಕತಾ ನಗರದಿಂದ ಅಹಮದಾಬಾದ್‌ಗೆ ಸಂಪರ್ಕ ಕಲ್ಪಿಸಲಿದೆ.
ನವೆಂಬರ್ 10ರಿಂದ ಮುಂದಿನ ವರ್ಷದ ಮೇ 10ರವರೆಗೆ ಭಾರತೀಯರು ವೀಸಾ ಇಲ್ಲದಿದ್ದರೂ ಥಾಯ್ಲೆಂಡ್‌ಗೆ ತೆರಳಲು ಅವಕಾಶ ನೀಡಲಾಗಿದೆ. ಪ್ರವಾಸೋದ್ಯಮ ಉತ್ತೇಜಿಸುವ ದೃಷ್ಟಿಯಿಂದ ಥಾಯ್ಲೆಂಡ್ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ (ಆರ್‌ಐಎಲ್) ಅಧ್ಯಕ್ಷ ಮುಕೇಶ್ ಅಂಬಾನಿ ಅವರಿಗೆ ಮೂರನೇ ಬಾರಿಗೆ ₹400 ಕೋಟಿ ಹಣಕ್ಕೆ ಬೇಡಿಕೆಯಿಟ್ಟು ಅಪರಿಚಿತ ವ್ಯಕ್ತಿ ಇ– ಮೇಲ್ ಮೂಲಕ ಬೆದರಿಕೆ ಹಾಕಿದ್ದಾನೆ.
ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು (ಮಂಗಳವಾರ) ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ. ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 45.1 ಓವರ್‌ಗಳಲ್ಲಿ 204 ರನ್ ಗಳಿಸಿ ಆಲೌಟ್ ಆಯಿತು.
ಒಂದು ತಂಡ ಕೊನೆಯ ಎಸೆತದವರೆಗೆ ಬೆಳೆದ ರೋಚಕ ಪಂದ್ಯದಲ್ಲಿ ನಿರಾಸೆ ಅನುಭವಿಸಿದರೆ, ಇನ್ನೊಂದು ತಂಡ, ಕೊನೆಗಳಿಗೆಯಲ್ಲಿ ಹಾಗೂಹೀಗೂ ಗೆದ್ದು ನಿಟ್ಟುಸಿರು ಬಿಟ್ಟಿತ್ತು. ಸೆಮಿಫೈನಲ್ ರೇಸ್‌ನಲ್ಲಿರುವ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ಕಥೆ ಇದು. ಬುಧವಾರ ಇಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇವೆರಡು ತಂಡಗಳು ಮುಖಾಮುಖಿಯಾಗಲಿದ್ದು ಉತ್ತಮ ಹೋರಾಟ ನಿರೀಕ್ಷಿಸಲಾಗಿದೆ.