ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ: ದೇಶಾದಾದ್ಯಂತ ರಾಮನ ಸ್ಮರಣೆ ಎಂದ ಚಂಪತ್ ರೈ

Published 2 ಜುಲೈ 2023, 13:17 IST
Last Updated 2 ಜುಲೈ 2023, 13:17 IST
ಅಕ್ಷರ ಗಾತ್ರ

ಅಯೋಧ್ಯೆ: ಅಯೋಧ್ಯೆಯ ನಿರ್ಮಾಣ ಹಂತದಲ್ಲಿರುವ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಗೂ 10 ದಿನಗಳ ಮೊದಲು ದೇಶಾದಾದ್ಯಂತ ಸುಮಾರು ಐದು ಲಕ್ಷ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಗಾಗಿ ಎಲ್ಲರೂ ಅಯೋಧ್ಯೆಗೆ ಬರಲು ಸಾಧ್ಯವಿಲ್ಲ. ಆರ್‌ಎಸ್‌ಎಸ್ ದೇಶಾದ್ಯಂತ ಸುಮಾರು ಐದು ಲಕ್ಷ ದೇವಾಲಯಗಳಲ್ಲಿ ನಾಮಸಂಕೀರ್ತನೆ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಯೋಜಿಸುತ್ತಿದೆ ಎಂದು ರೈ ಮಾಹಿತಿ ನೀಡಿದರು.

ದೇಶಾದಾದ್ಯಂತ ಸುಮಾರು 2.5 ಲಕ್ಷ ಗ್ರಾಮ ಪಂಚಾಯಿತಿಗಳಿದ್ದು, ಬಹುತೇಕ ಎಲ್ಲಾ ದೇವಾಲಯಗಳಲ್ಲಿ ರಾಮನ ಸ್ಮರಣೆ ಮಾಡಲಾಗುವುದು ಎಂದರು. ಕಾರ್ಯಕ್ರಮಗಳನ್ನು ರಸ್ತೆ ಹಾಗೂ ಬೃಹತ್‌ ವೇದಿಕೆಗಳಲ್ಲಿ ಏರ್ಪಡಿಸಬಾರದು ಎಂದು ಟ್ರಸ್ಟ್ ನಿರ್ದಿಷ್ಟ ಸೂಚನೆಗಳನ್ನು ನೀಡಲಿದೆ ಎಂದು ಹೇಳಿದ್ದಾರೆ.

ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಯ ದೃಶ್ಯಾವಳಿಗಳನ್ನು ದೂರದರ್ಶನವು ನೇರ ಪ್ರಸಾರ ಮಾಡಲಿದೆ. ಸಿಖ್ ಸಮುದಾಯವು ಗುರುದ್ವಾರಗಳಲ್ಲಿ ಮತ್ತು ಜೈನ ಸಮುದಾಯವು ಅವರ ಸಂಸ್ಕೃತಿಯ ಪ್ರಕಾರ ದೇವಾಲಯಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬಹುದು ಎಂದು ರೈ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT