ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಆಧ್ಯಾತ್ಮಿಕ ಕಾರ್ಯಕ್ರಮ: ರಜನಿಕಾಂತ್

Published 23 ಜನವರಿ 2024, 14:19 IST
Last Updated 23 ಜನವರಿ 2024, 14:19 IST
ಅಕ್ಷರ ಗಾತ್ರ

ಚೆನ್ನೈ: ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಆಧ್ಯಾತ್ಮಿಕ ಕಾರ್ಯಕ್ರಮವಾಗಿತ್ತು ಎಂದು ನಟ ರಜನಿಕಾಂತ್ ಹೇಳಿದ್ದಾರೆ.

ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಬಿಜೆಪಿಯ ರಾಜಕೀಯ ಕಾರ್ಯಕ್ರಮ ಎಂದು ವಿಪಕ್ಷಗಳು ಟೀಕಿಸಿದ್ದವು. ಅಲ್ಲದೆ ಕಾರ್ಯಕ್ರಮದಲ್ಲಿ ರಜನಿಕಾಂತ್ ಭಾಗವಹಿಸಿದ್ದರ ವಿರುದ್ಧ ತಮಿಳುನಾಡಿನಲ್ಲಿ ವಿಪಕ್ಷಗಳ ನಾಯಕರಿಂದಲೂ ವಿರೋಧ ವ್ಯಕ್ತವಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ರಜನಿಕಾಂತ್, ವೈಯಕ್ತಿಕ ಅಭಿಪ್ರಾಯಗಳು ಭಿನ್ನವಾಗಿರಬಹುದು. ನನ್ನ ಪಾಲಿಗಿದು ಆಧ್ಯಾತ್ಮಿಕ ಕಾರ್ಯಕ್ರಮವಾಗಿತ್ತು. ರಾಮದೇವರ ದರ್ಶನ ಪಡೆದ ಮೊದಲ 150 ಮಂದಿಯಲ್ಲಿ ತಾನೂ ಸೇರಿದ್ದಕ್ಕೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ಕಾರ್ಯಕ್ರಮ ಎಂದು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಗೌರವಯುತವಾಗಿ ಆಹ್ವಾನ ತಿರಸ್ಕರಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT