ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಏರೊಸ್ಪೇಸ್ ಪಾರ್ಕ್ನಲ್ಲಿ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು.

43 ಎಕರೆ ಪ್ರದೇಶದಲ್ಲಿ ಅಂದಾಜು ₹ 1,600 ಕೋಟಿ ವೆಚ್ಚದಲ್ಲಿ ಈ ಕೇಂದ್ರ ತಲೆ ಎತ್ತಿದೆ. ಈ ಕೇಂದ್ರವು ಭಾರತ ಮತ್ತು ವಿಶ್ವದಲ್ಲಿ ವಿಮಾನಯಾನ ವಲಯವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಮೋದಿ ಅಭಿಪ್ರಾಯಪಟ್ಟರು. ಇದರೊಂದಿಗೆ, ದಿನದ ಪ್ರಮುಖ ವಿದ್ಯಮಾನಗಳು ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.