ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಮಂದಿರ ಮೂರ್ತಿ ಪ್ರತಿಷ್ಠಾಪನೆ| ಮುಂಬೈ- ಅಯೋಧ್ಯೆಗೆ ವಿಶೇಷ ರೈಲು: ಬಿಜೆಪಿ

Published 15 ನವೆಂಬರ್ 2023, 8:46 IST
Last Updated 15 ನವೆಂಬರ್ 2023, 8:46 IST
ಅಕ್ಷರ ಗಾತ್ರ

ಮುಂಬೈ: ಮುಂದಿನ ವರ್ಷ ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಬೈನಿಂದ ಅಯೋಧ್ಯೆಗೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗುವುದು ಎಂದು ಬಿಜೆಪಿ ನಾಯಕ ಆಶಿಶ್ ಶೆಲಾರ್ ಹೇಳಿದ್ದಾರೆ.

ಜನವರಿ 24ರಿಂದ ಮುಂಬೈನ ದಾದರ್‌ ರೈಲ್ವೆ ನಿಲ್ದಾಣದಿಂದ ಅಯೋಧ್ಯೆಗೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗುವುದು. ಈ ಮೂಲಕ ರಾಮನ ದರ್ಶನ ಪಡೆಯಲು ಜನರಿಗೆ ಅನುಕೂಲವಾಗಲಿದೆ ಎಂದರು.

‘ಪ್ರತಿ ವರ್ಷ ರಾಮನವಮಿಯ ದಿನದಂದು ಶ್ರೀರಾಮನ ಹಣೆಗೆ ಸೂರ್ಯನ ಕಿರಣಗಳು ನೇರವಾಗಿ ಬೀಳುವಂತೆ ಮಾಡಲು ವಿಶಿಷ್ಟ ಉಪಕರಣವನ್ನು ಅಳವಡಿಸಲಾಗುವುದು. ರೂರ್ಕಿಯ ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ ಮತ್ತು ಪುಣೆಯ ಒಂದು ಸಂಸ್ಥೆ ಜಂಟಿಯಾಗಿ ಇದಕ್ಕಾಗಿ ಗಣಕೀಕೃತ ಕಾರ್ಯಕ್ರಮವನ್ನು ರಚಿಸಿದೆ’ ಎಂದು ದೇವಾಲಯ ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT