ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂಸಾಚಾರ ಪ್ರಕರಣ: ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ಕರ್ಫ್ಯೂ ಅಂತ್ಯ

Last Updated 4 ಮೇ 2022, 13:10 IST
ಅಕ್ಷರ ಗಾತ್ರ

ಭೋಪಾಲ್‌/ಖಾರ್ಗೋನ್‌: ರಾಮನವಮಿ ಸಂದರ್ಭದಲ್ಲಿ ಸಂಭವಿಸಿದ ಹಿಂಸಾಚಾರದಿಂದ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ವಿಧಿಸಲಾಗಿದ್ದ ಕರ್ಫ್ಯೂವನ್ನು ಹಿಂಪಡೆಯಲಾಗಿದೆ ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್‌ ಮಿಲಿಂದ್‌ ಧೋಕೆ ಹೇಳಿದರು.

ಈ ಕುರಿತು ಮಾಹಿತಿ ನೀಡಿದ ಮಿಲಿಂದ್‌, ‘ಸ್ಥಳೀಯ ಆಡಳಿತವು ಬುಧವಾರ ಶಾಂತಿ ಸಮಿತಿ ಸಭೆಯನ್ನು ಏರ್ಪಡಿಸಿತ್ತು. ಇದರಲ್ಲಿ ಎಲ್ಲ ಸಮುದಾಯಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಎಲ್ಲರ ಒಪ್ಪಿಗೆಯೊಂದಿಗೆ ಏಪ್ರಿಲ್‌ 10ರಂದು ವಿಧಿಸಲಾಗಿದ್ದ ಎಲ್ಲ ನಿರ್ಬಂಧಗಳನ್ನು ಮತ್ತು ಕರ್ಫ್ಯೂವನ್ನು ಹಿಂಪಡೆಯಲಾಗಿದೆ’ ಎಂದರು.

ಏಪ್ರಿಲ್‌ 10ರಂದು ರಾಮನವಮಿಯ ಸಂದರ್ಭದಲ್ಲಿ ಹಿಂದೂ ಮತ್ತು ಮುಸ್ಲಿಮರ ನಡುವೆ ಗಲಭೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ 24 ದಿನಗಳ ಕಾಲ ಕರ್ಫ್ಯೂವನ್ನು ವಿಧಿಸಲಾಗಿತ್ತು. ಸದ್ಯ, ಬುಧವಾರ ಸಂಜೆಯಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ಫ್ಯೂವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಮಿಲಿಂದ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT