ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ: ರಾಮ ಮೂರ್ತಿ ಮೆರವಣಿಗೆ ನಡೆಸುತ್ತಿದ್ದವರ ಮೇಲೆ ಚಪ್ಪಲಿ ತೂರಾಟ- ಬಂಧನ

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಹಾತನೂರಿನಲ್ಲಿ ಘಟನೆ
Published 24 ಜನವರಿ 2024, 3:23 IST
Last Updated 24 ಜನವರಿ 2024, 3:23 IST
ಅಕ್ಷರ ಗಾತ್ರ

ಹೈದರಾಬಾದ್: ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಗುಂಪೊಂದು ರಾಮನ ಮೂರ್ತಿಯ ಮೆರವಣಿಗೆ ಹೊರಟಿದ್ದ ವೇಳೆ ಇಬ್ಬರು ಕಿಡಿಗೇಡಿಗಳು ಆ ಮೆರವಣಿಗೆ ಮೇಲೆ ಚಪ್ಪಲಿ ತೂರಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಹಾತನೂರಿನಲ್ಲಿ ನಡೆದಿದೆ.

ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅದರಲ್ಲಿ ಒಬ್ಬ 14 ವರ್ಷದ ಬಾಲಕ.

ಮೆರವಣಿಗೆ ನಡೆಯುವ ವೇಳೆ ಪೊಲೀಸರು ಇದ್ದಿದ್ದರಿಂದ ಗುಂಪು ಘರ್ಷಣೆ ತಪ್ಪಿದೆ ಎಂದು ತಿಳಿದು ಬಂದಿದೆ.

ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮೆರವಣಿಗೆ ಆಯೋಜಿಸಿದ್ದವರು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೆಲ ಮುಸ್ಲಿಂ ಕಿಡಿಗೇಡಿಗಳು ಗಲಭೆ ಎಬ್ಬಿಸುವ ಅವಕಾಶ ಬಳಸಿಕೊಳ್ಳುತ್ತಿದ್ದಾರೆ ಎಂದು ತೆಲಂಗಾಣ ಬಿಜೆಪಿ ವಕ್ತಾರ ಎನ್.ವಿ. ಸುಭಾಸ್ ಈ ಘಟನೆ ಕುರಿತು ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT