ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ ಪ್ರಾಣ ಪ್ರತಿಷ್ಠಾಪನೆ: ಮಗುವಿಗೆ ರಾಮ್ ರಹೀಂ ಎಂದು ಹೆಸರಿಟ್ಟ ಮುಸ್ಲಿಂ ಮಹಿಳೆ

Published 22 ಜನವರಿ 2024, 13:07 IST
Last Updated 22 ಜನವರಿ 2024, 13:07 IST
ಅಕ್ಷರ ಗಾತ್ರ

ಫೈರೋಜಾಬಾದ್‌ (ಉ.ಪ್ರ): ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ದಿನವೇ ಹುಟ್ಟಿದ ಮಗುವಿಗೆ ಇಲ್ಲಿನ ಮುಸ್ಲಿಂ ಮಹಿಳೆಯೊಬ್ಬರು ರಾಮ್ ರಹೀಂ ಎಂದು ಹೆಸರಿಡುವ ಮೂಲಕ ಹಿಂದೂ–ಮುಸ್ಲಿಂ ಭಾವೈಕ್ಯತೆಯ ಸಂದೇಶ ನೀಡಿದ್ದಾರೆ.

‘ಫರ್ಝಾನ ಎಂಬವರು ಸೋಮವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಹಾಗೂ ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ’ ಎಂದು ಜಿಲ್ಲಾ ಮಹಿಳಾ ಆಸ್ಪತ್ರೆಯ ಉಸ್ತುವಾರಿ ಡಾ. ನವೀನ್ ಜೈನ್ ತಿಳಿಸಿದ್ದಾರೆ.

‌ಮಗುವಿನ ಅಜ್ಜಿ ಹುಸ್ನಾ ಬಾನು ಮಗುವಿಗೆ ರಾಮ್‌ ರಹೀಂ ಎಂದು ನಾಮಕರಣ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಹಿಂದೂ ಮುಸ್ಲಿಂ ಏಕತೆಯ ಸಂದೇಶ ಸಾರಲೋಸುಗ ರಾಮ್‌ ರಹೀಂ ಎಂದು ಹೆಸರಿಟ್ಟಿದ್ದೇವೆ ಎಂದು ಮಗುವಿನ ತಾಯಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT