ರಾಮದುರ್ಗ: ಮೊದಲಿನ ಕಾರ್ಮಿಕ ಕಾನೂನುಗಳನ್ನು ಬದಲಿಸಿ 4 ಹೊಸ ಸಂಹಿತೆಗಳನ್ನು ರಚಿಸಿ ಬಂಡವಾಳ ಶಾಹಿಗಳ ಜೇಬು ತುಂಬಿಸಲು ಹೊರಟಿರುವ ಕೇಂದ್ರ ಸರ್ಕಾರದ ನೀತಿಯನ್ನು ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಖಾನಪೇಠ ಗ್ರಾಮದ ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ಮುಂಭಾಗದಲ್ಲಿ ಹೊಸ ಸಂಹಿತೆಯ ಆದೇಶ ಪ್ರತಿ ದಹಿಸಿ ಕಪ್ಪು ದಿನ ಆಚರಿಸಲಾಯಿತು.

‘ವ್ಯವಹಾರ ಮಾಡಲು ಸುಲಭತೆ’ ಎಂಬ ಹೆಸರಿನಲ್ಲಿ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ತಂದಿರುವ ಕೇಂದ್ರ ಸರ್ಕಾರದ ವಿರುದ್ಧ ಈಗಾಗಲೇ ಇಡೀ ದೇಶದಲ್ಲಿ 4 ಕೋಟಿ ಜನ ಪ್ರತಿಭಟಿಸಿ ಮುಷ್ಕರ ಮಾಡಿ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿತ್ತು. ಆದರೂ ಕೇಂದ್ರ ಸರ್ಕಾರ ಏ.1 ರಿಂದ ಹೊಸ ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದು ದುಡಿಯುವ ಜನರನ್ನು ಬೀದಿಗೆ ತಳ್ಳಿದೆ ಎಂದು ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕ ಸಂಹಿತೆಗಳ ರಚನೆಯ ಹಂತದಿಂದಲೂ ಕಾರ್ಮಿಕ ಸಂಘಟನೆಗಳೊಂದಿಗೆ ಯಾವುದೇ ಸಮಾಲೋಚನೆ, ವಿಚಾರ ವಿನಿಮಯ ಮಾಡದೆ ಭಾರತದ ಕಾರ್ಮಿಕರ ಜೀವನಕ್ಕೆ ಸಂಬಂಧಿಸಿದ ಕಾರ್ಮಿಕ ಸಮ್ಮೇಳನ ಕರೆಯದೆ ಈ ರೀತಿ ಕಾರ್ಮಿಕರಿಗೆ ಮಾರಕವಾಗುವ ಹೊಸ ಸಂಹಿತೆ ಜಾರಿಗೆ ತಂದಿರುವುದು ಕಾರ್ಮಿಕ ಮಾನದಂಡಗಳ ಉಲ್ಲಂಘನೆಯಾಗಿದೆ ಎಂದು ವಿರೋಧ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ತಂದಿರುವ ಹೊಸ ಕಾರ್ಮಿಕ ಕಾನೂನುಗಳಿಂದ ಸಂಘಟನೆಯ ನೋಂದಣಿ, ಹೋರಾಟದ ಹಕ್ಕು, ಕೆಲಸದ ಅವಧಿ ಮಿತಿ ಮತ್ತು ಸುರಕ್ಷತಾ ನಿಯಮಗಳನ್ನು ಕೇಂದ್ರ ಸರ್ಕಾರ ಕಸಿದುಕೊಳ್ಳುತ್ತಿದೆ ಎಂದು ದೂರಿದರು.

ಸಿಐಟಿಯು ಜಿಲ್ಲಾ ಸಂಚಾಲಕ ಗೈಬು ಜೈನೆಖಾನ್, ಕಟ್ಟಡ ಕಾರ್ಮಿಕರ ಸಂಘದ ಮುಖಂಡ ನಾಗಪ್ಪ ಸಂಗೊಳ್ಳಿ, ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ಕಾರ್ಮಿಕರ ಸಂಘದ ಅಧ್ಯಕ್ಷ ಮಹಾಂತೇಶ ಪಾಶ್ಚಾಪೂರ, ಕಾರ್ಯದರ್ಶಿ ಕೃಷ್ಣಾ ಹೊಸೂರ, ಮುಖಂಡರಾದ ಹನಮಂತ ಜಾಧವ, ಚನ್ನವೀರ ಕಣವಿ, ಉಮೇಶ ಮೈಲಾರಿ, ಶಿವನಗೌಡ ಪಾಟೀಲ ಮತ್ತು ರಮೇಶ ಮೇಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-21-903198149

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.