ರಾಮನಗರ: ‘ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ನಾರಿಶಕ್ತಿ ವಂದನ ಅಧಿನಿಯಮ ಜಾರಿಗೆ ಸಂವಿಧಾನ ತಿದ್ದುಪಡಿ ಮಸೂದೆ ಜೊತೆಗೆ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆ ಯನ್ನು ತರಾತುರಿಯಲ್ಲಿ ಮಂಡಿಸಿ ಚುನಾವಣೆ ಯಲ್ಲಿ ರಾಜಕೀಯ ಲಾಭ ಪಡೆಯಲು ಮುಂದಾಗಿದ್ದ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಮಹಿಳಾ ವಿರೋಧಿ ಮುಖವಾಡ ಕಳಚಿದೆ’ ಎಂದು ಕೆಪಿಸಿಸಿ ಮಹಿಳಾ ಘಟಕದ ಕಾರ್ಯದರ್ಶಿ ಮಂಜುಳಾ ನಾಯ್ಡು ವಾಗ್ದಾಳಿ ನಡೆಸಿದರು.

‘2023ರಲ್ಲೇ ಮೀಸಲಾತಿ ಮಸೂದೆಗೆ ಒಪ್ಪಿಗೆ ಸಿಕ್ಕಿದ್ದರೂ ಆಗಲೇ ಯಾಕೆ ಅನುಷ್ಠಾನ ಮಾಡಲಿಲ್ಲ. ಜನಗಣತಿ ಆಧಾರದ ಮೇಲೆ ಜಾರಿ ಷರತ್ತು ವಿಧಿಸಿದ್ದ ಸರ್ಕಾರ, ಅವಸರದಲ್ಲಿ ವಿಶೇಷ ಅಧಿವೇಶನ ಕರೆದು ನಾಟಕವಾಡಿದೆ. ತನ್ನ ರಾಜಕೀಯ ಹಿಡನ್ ಅಜೆಂಡಾ ಜಾರಿಗೆ ಮುಂದಾದ ಬಿಜೆಪಿಗೆ ವಿರೋಧ ಪಕ್ಷಗಳು ತಕ್ಕ ಪಾಠ ಕಲಿಸಿವೆ’ ಎಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನಡೆಸಿದ ಪ್ರಹಸನಕ್ಕೆ ನಿರೀಕ್ಷೆಯಂತೆ ಸೋಲಾಗಿದ್ದರೂ, ಅದನ್ನು ವಿರೋಧ ಪಕ್ಷಗಳ ತಲೆಗೆ ಕಟ್ಟಿ ರಾಜಕೀಯ ಲಾಭ ಪಡೆಯಲು ಬಿಜೆಪಿ ಮುಂದಾಗಿರುವುದು ಗಟ್ಟಾಗಿ ಉಳಿದಿಲ್ಲ. ಒಂದು ಕಾಲದಲ್ಲಿ ಮೀಸಲಾತಿ ಮಸೂದೆ ವಿರೋಧಿಸಿ ಸೋಲಿಸಿದ್ದವರು, ಈಗ ಮಹಿಳಾ ಪರ ಎನ್ನುತ್ತಲೇ ಮೀಸಲಾತಿ ಜಾರಿಯಾಗದಂತೆ ನೋಡಿಕೊಳ್ಳುತ್ತಿದ್ದಾರೆ. ಈ ವಿಷಯದಲ್ಲಿ ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ಟೀಕಿಸಿದರು.

‘ಬಿಜೆಪಿಗೆ ನಿಜವಾಗಿಯೂ ಮಹಿಳಾ ಪರ ಕಾಳಜಿ ಇದ್ದರೆ ಈಗಾಗಲೇ ಒಪ್ಪಿಗೆ ಸಿಕ್ಕಿರುವ ಅಧಿನಿಯಮ ವನ್ನು ತಕ್ಷಣವೇ ಜಾರಿಗೆ ತರಲಿ. ಅದು ಬಿಟ್ಟು ಕ್ಷೇತ್ರ ಪುನರ್ ವಿಂಗಡಣೆ ಹೆಸರಿನಲ್ಲಿ ಅನಗತ್ಯ ವಿಳಂಬ ಮಾಡುತ್ತಾ, ವಿರೋಧ ಪಕ್ಷಗಳನ್ನು ಟೀಕಿಸುವುದನ್ನು ಬಿಡಲಿ. ಬಿಜೆಪಿಯ ಬಂಡವಾಳ ಏನೆಂದು ಈಗಾಗಲೇ ದೇಶದ ಜನರಿಗೆ ಅರ್ಥವಾಗಿದೆ. ಈ ಕುರಿತು ಕಾಂಗ್ರೆಸ್ ರಾಜ್ಯದಾದ್ಯಂತ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ’ ಎಂದರು.

ಕೆಪಿಸಿಸಿ ಸಾಮಾಜಿಕ ಮಾಧ್ಯಮ ಘಟಕದ ಕಾರ್ಯದರ್ಶಿ ಪುಷ್ಪ ಮಂಜುನಾಥ್ ರೆಡ್ಡಿ ಮಾತನಾಡಿ, ‘ಹೆಣ್ಣು ಮಕ್ಕಳಿಗೆ ರಾಜಕಾರಣದಲ್ಲಿ ಪ್ರಾತಿನಿಧ್ಯ ಕೊಟ್ಟಿದ್ದೇ ಕಾಂಗ್ರೆಸ್. ಮಹಿಳಾ ಮೀಸಲಾತಿ ಚರ್ಚೆ ರಾಜೀವ್ ಗಾಂಧಿ ಅವರ ಕಾಲದಲ್ಲೇ ಆರಂಭವಾಗಿತ್ತು. ಅವರ ಅವರು ಮಂಡಿಸಿದ್ದ ಮೀಸಲಾತಿ ಮಸೂದೆಯನ್ನು ಬಿಜೆಪಿ ಸೇರಿದಂತೆ ವಿರೋಧ ಪಕ್ಷ ಒಂದಾಗಿ ಸೋಲಿಸಿದ್ದು ದೇಶದ ಜನರಿಗೆ ಗೊತ್ತಿದೆ’ ಎಂದರು.

‘ಪ್ರಧಾನಿ ಪಿ.ವಿ. ನರಸಿಂಹರಾವ್ ಕಾಲದಲ್ಲಿ ಮೀಸಲಾತಿ ಮಸೂದೆ ಅಂಗೀಕಾರ ಪಡೆಯಿತು. ಕಾಂಗ್ರೆಸ್ ನಿಂದಾಗಿಯೇ ದೇಶದ 15 ಲಕ್ಷ ಮಹಿಳೆಯರು ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಪಡೆದರು. ಕಾಂಗ್ರೆಸ್ನ ಮಹಿಳಾ ಪರ ಬದ್ಧತೆ ಪ್ರಶ್ನಿಸುವ ನೈತಿಕತೆ ಬಿಜೆಪಿಗಿಲ್ಲ. ಮಹಿಳಾ ಮೀಸಲಾತಿ ಹೆಸರಲ್ಲಿ ಬಿಜೆಪಿ ಕುತಂತ್ರವನ್ನು ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಬಯಲುಮಾಡಿದೆ’ ಎಂದರು.

ಪಕ್ಷದ ಜಿಲ್ಲಾಧ್ಯಕ್ಷರೂ ಆಗಿರುವ ರೇಷ್ಮೆ ಮಂಡಳಿ ಅಧ್ಯಕ್ಷ ಎಸ್. ಗಂಗಾಧರ್, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಕೆ. ರಾಜು, ರುಡಾ ಅಧ್ಯಕ್ಷ ಎ.ಬಿ. ಚೇತನ್ ಕುಮಾರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಕೋಕಿಲಾ ರಾಣಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಅರ್ಪಿತ ಹರೀಶ್, ಮುಖಂಡರಾದ ಸಿಎನ್ಆರ್ ವೆಂಕಟೇಶ್, ಗುರುಪ್ರಸಾದ್, ವಾಣಿ ನಾಗರಾಜು, ಅನಿತಾ, ಶೋಭಾ, ಅಖಿಲ ಬಾನು, ಪುಷ್ಪ, ನಾಗಮ್ಮ, ಸುಮಿತ್ರಾ, ಪದ್ಮಾವತಿ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-14-2012140165

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.