ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದು ದೇಶ ಒಂದು ಚುನಾವಣೆ: ಸಾರ್ವಜನಿಕ ಅಭಿಪ್ರಾಯ ಕೇಳಿದ ಕೋವಿಂದ್ ಸಮಿತಿ

Published 6 ಜನವರಿ 2024, 8:26 IST
Last Updated 6 ಜನವರಿ 2024, 8:26 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ನೇತೃತ್ವದ ‘ಒಂದು ರಾಷ್ಟ್ರ ಒಂದು ಚುನಾವಣೆ‘ ಸಮಿತಿಯು ಜನರಿಂದ ಸಲಹೆಗಳನ್ನು ಆಹ್ವಾನಿಸಿದೆ.

ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸಲು ಅಸ್ತಿತ್ವದಲ್ಲಿರುವ ಕಾನೂನು ಆಡಳಿತಾತ್ಮಕ ಚೌಕಟ್ಟಿನಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲು ಸಲಹೆಗಳನ್ನು ಸೂಚಿಸಿ ಎಂದು ಸಾರ್ವಜನಿಕ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಜ. 15ರೊಳಗೆ ಕಳುಹಿಸುವ ಸಲಹೆಗಳನ್ನು ಸ್ವೀಕರಿಸಲಾಗುವುದು ಎಂದು ಸಮಿತಿ ತಿಳಿಸಿದೆ. ಸಮಿತಿಯ ವೆಬ್‌ಸೈಟ್‌ onoe.gov.inನಲ್ಲಿ ಅಥವಾ sc-hlc@gov.in ಗೆ ಇ–ಮೇಲ್ ಮಾಡುವ ಮೂಲಕ ಸಲಹೆಗಳನ್ನು ಸೂಚಿಸಬಹುದು ಎಂದು ಪ್ರಕರಣೆಯಲ್ಲಿ ತಿಳಿಸಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಈ ಸಮಿತಿಯನ್ನು ರಚಿಸಲಾಗಿತ್ತು. ಈವರೆಗೂ ಎರಡು ಸಭೆಗಳನ್ನು ನಡೆಸಿದೆ. ಒಂದು ದೇಶ ಒಂದು ಚುನಾವಣೆ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳಲು ಎಲ್ಲರಿಗೂ ಒಪ್ಪುವಂಥ ಒಂದು ದಿನಾಂಕವನ್ನು ಸೂಚಿಸಬೇಕು ಎಂದು ರಾಜಕೀಯ ಪಕ್ಷಗಳಿಗೆ ಪತ್ರ ಬರೆದಿತ್ತು.

ಆರು ರಾಷ್ಟ್ರೀಯ ಪಕ್ಷಗಳು, 33 ರಾಜ್ಯ ಪಕ್ಷಗಳು ಹಾಗೂ 7 ನೋಂದಾಯಿತ ಪಕ್ಷಗಳಿಗೆ ಪತ್ರ ಬರೆದಿತ್ತು. ಈ ಬಗ್ಗೆ ಕಾನೂನು ಅಯೋಗದ ಸಲಹೆಗಳನ್ನೂ ಸಮಿತಿ ಈಗಾಗಲೇ ಕೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT