ರಾಂಚಿ: ಜೆಎಂಎಂ ಕಾರ್ಯಾಧ್ಯಕ್ಷ ಹೇಮಂತ್ ಸೊರೇನ್ ಅವರು ಇಂದು (ಗುರುವಾರ) ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆ ರಾಂಚಿ ನಗರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ರಾಂಚಿಯ ಮೊರಾಬಾಡಿ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದರಿಂದಾಗಿ ನಗರದಲ್ಲಿ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆಯಿದೆ. ಇಂತಹ ಪರಿಸ್ಥಿತಿಯಲ್ಲಿ ಶಾಲಾ ಬಸ್ಗಳಲ್ಲಿ ಬರುವ ವಿದ್ಯಾರ್ಥಿಗಳು ಗಂಟೆಗಟ್ಟಲೆ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿಕೊಳ್ಳಬಹುದು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ' ಎಂದು ಜಿಲ್ಲಾ ಶಿಕ್ಷಣಾಧಿಕಾರಿಗಳ ಕಚೇರಿ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಇಂದು ಸಂಜೆ 4 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರು ಸೊರೇನ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

'ಇಂಡಿಯಾ' ಕೂಟದ ಪ್ರಮುಖ ನಾಯಕರು ಸೇರಿದಂತೆ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
.ನ. 28ರಂದು ಸೊರೇನ್ ಪ್ರಮಾಣ: ರಾಹುಲ್ ಗಾಂಧಿ ಸೇರಿ ಪ್ರಮುಖ ನಾಯಕರು ಭಾಗಿ ಸಾಧ್ಯತೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.