ಕೊಚ್ಚಿ(ಕೇರಳ): ‘ರ್ಯಾಪರ್ ಹಿರಣ್ದಾಸ್ ಮುರಳಿ ಅಲಿಯಾಸ್ ವೇಡನ್ ತಲೆಮರೆಸಿಕೊಂಡಿಲ್ಲ, ಆತ ಇರುವ ಸ್ಥಳದ ಬಗ್ಗೆ ನಿಗಾ ಇಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಆರೋಪದಲ್ಲಿ ವೇಡನ್ ಮೇಲೆ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೊಚ್ಚಿ ನಗರ ಪೊಲೀಸ್ ಆಯುಕ್ತ ಪುಟ್ಟ ವಿಮಲಾದಿತ್ಯ, ‘ವೇಡನ್ ಮೇಲೆ ನಿಗಾ ಇಟ್ಟಿದ್ದೇವೆ. ಅವರು ಪರಾರಿಯಾಗಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

‘ಪ್ರಕರಣಕ್ಕೆ ಸಂಬಂಧಿಸಿದಂತೆ ವೇಡನ್ ಅವರು ಕೇರಳ ಹೈಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅದು ವಿಚಾರಣೆಗೆ ಬರುವವರೆಗೂ ತನಿಖಾ ಪ್ರಕ್ರಿಯೆಯು ಮುಂದುವರಿಯುತ್ತದೆ’ ಎಂದು ಹೇಳಿದ್ದಾರೆ.

ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸುವುದು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ಸಂಗ್ರಹಿಸುವುದು ಮುಂದುವರಿಯುತ್ತದೆ ಎಂದೂ ತಿಳಿಸಿದ್ದಾರೆ.

ಮಾದಕವಸ್ತು ಹೊಂದಿರುವುದಕ್ಕೆ ಸಂಬಂಧಿಸಿದಂತೆ ಈ ಹಿಂದೆಯೂ ವೇಡನ್ ಅವರನ್ನು ಪೊಲೀಸರು ಬಂಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.