ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅತ್ಯಾಚಾರ ಪ್ರಕರಣ: ಪ್ರತಿಭಟನೆ ಮುಂದುವರೆಸಿದ ಸ್ವಾತಿ ಮಾಲೀವಾಲ್

Published 22 ಆಗಸ್ಟ್ 2023, 8:26 IST
Last Updated 22 ಆಗಸ್ಟ್ 2023, 8:26 IST
ಅಕ್ಷರ ಗಾತ್ರ

ನವದೆಹಲಿ: ಬಾಲಕಿ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿ, ಆಕೆ ಗರ್ಭ ಧರಿಸಲು ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿಯನ್ನು ಭೇಟಿಯಾಗಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲೀವಾಲ್ ದೆಹಲಿಯ ಆಸ್ಪತ್ರೆ ಎದುರು ಪ್ರತಿಭಟನೆ ಮುಂದುವರಿಸಿದ್ದಾರೆ.

ಸ್ವಾತಿ ಮಾಲೀವಾಲ್ ದೆಹಲಿಯ ಆಸ್ಪತ್ರೆ ಎದುರು ನಿನ್ನೆ ಸಂಜೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಆರೋಪಿ ಹಾಗೂ ದೆಹಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರೇಮೋದಯ್‌ ಖಾಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಗೆ ಗರ್ಭಪಾತದ ಔಷಧ ನೀಡಿದ ಆರೋಪದ ಮೇಲೆ ಆರೋಪಿಯ ಪತ್ನಿಯನ್ನೂ ವಶಕ್ಕೆ ಪಡೆಯಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT