ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಜ್ಞೆ ಮೂಲಕವೇ ಹೇಳಿಕೆ ನೀಡಿದ ಅತ್ಯಾಚಾರ ಸಂತ್ರಸ್ತೆ: ಅಪರಾಧಿಗೆ ಜೀವಾವಧಿ ಶಿಕ್ಷೆ

Published 29 ಜೂನ್ 2024, 15:04 IST
Last Updated 29 ಜೂನ್ 2024, 15:04 IST
ಅಕ್ಷರ ಗಾತ್ರ

ಪಾಲ್ಘರ್‌: ಮಾತು ಬಾರದ 16 ವರ್ಷದ ಅಂಗವಿಕಲ ಬಾಲಕಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ನಡೆದ ಬಗ್ಗೆ ಸಂಜ್ಞೆ ಮೂಲಕ ನ್ಯಾಯಾಲಯದಲ್ಲಿ ಹೇಳಿಕೆ ನೀಡಿ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 

ಪಾಲ್ಘರ್‌ ಜಿಲ್ಲೆಯಲ್ಲಿ 2017ರ ಜನವರಿಯಲ್ಲಿ 48 ವರ್ಷದ ಸನೇಹಿ ಶ್ರೀಕಿಸನ್‌ ಗೌರ್‌ ಎಂಬ ಕಾರ್ಮಿಕನು ತನ್ನ ನೆರೆಮನೆಯ, ಮಾತು ಬಾರದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದನು. ಬಳಿಕ ಬಾಲಕಿಯು ಸಂಜ್ಞೆ ಮೂಲಕ ತನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯವನ್ನು ತಾಯಿಗೆ ವಿವರಿಸಿದ್ದಳು. ಬಳಿಕ ಆಕೆಯ ಕುಟುಂಬವು ಗೌರ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣದ ವಿಚಾರಣೆಯು ವಾಸೈ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಬಾಲಕಿ ಸೇರಿದಂತೆ 9 ಮಂದಿ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಿದ್ದಾರೆ.

ಘಟನೆಯು ಗಂಭೀರ ಪ್ರಕರಣ ಎಂದು ಹೇಳಿದ ವಿಶೇಷ ಪೋಕ್ಸೊ ನ್ಯಾಯಾಧೀಶರಾದ ಎಸ್‌.ವಿ ಕೊಂಗಲ್‌ ಅವರು, ‘ಅಪರಾಧದ ಸ್ವರೂಪವನ್ನು ಗಮನಿಸಿ ಅಪರಾಧಿಗೆ ಗರಿಷ್ಠ ಶಿಕ್ಷೆ ನೀಡಬೇಕಾಗುತ್ತದೆ’ ಎಂದು ತಿಳಿಸಿ ಗೌರ್‌ಗೆ ₹10,000 ದಂಡ ಮತ್ತು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT