ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಉದ್ಯಮಿ ರತನ್‌ ಟಾಟಾ

Last Updated 10 ಜುಲೈ 2018, 18:22 IST
ಅಕ್ಷರ ಗಾತ್ರ

ಮುಂಬೈ: ಮುಂದಿನ ತಿಂಗಳ 24ರಂದು ಮುಂಬೈನಲ್ಲಿ ನಡೆಯುವ ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಉದ್ಯಮಿರತನ್‌ ಟಾಟಾ ಭಾಗವಹಿಸಲಿದ್ದು ಮೋಹನ್‌ ಭಾಗವತ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.

ಆರ್‌ಎಸ್‌ಎಸ್‌ನ ಅಂಗವಾಗಿರುವ ನಾನಾ ಪಾಲ್ಕರ್‌ ಸ್ಮೃತಿ ಸ್ವಯಂ ಸೇವಾ ಸಂಸ್ಥೆ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಮೂಲಗಳು ತಿಳಿಸಿವೆ.

ಮುಂಬೈನ ಟಾಟಾ ಮೆಮೋರಿಯಲ್‌ ಆಸ್ಪತ್ರೆ ಸಮೀಪವೇ ಈ ಸಂಸ್ಥೆ ಕಚೇರಿ ಇದೆ. ಆಗಸ್ಟ್‌ 24ರಂದು ನಾನಾ ಪಾಲ್ಕರ್‌ ಶತಮಾನೋತ್ಸವ ಆಚರಣೆ ನಡೆಯಲಿದೆ. ಕಳೆದ ತಿಂಗಳು ನಡೆದ ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಭಾಗವಹಿಸಿದ್ದ ವಿಷಯ ಚರ್ಚೆಗೆ ಗ್ರಾಸವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT